27.9 C
Udupi
Monday, June 2, 2025
spot_img
spot_img
HomeBlogಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ , ಶಾಲಾ ಪ್ರಾರಂಭೋತ್ಸವ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ , ಶಾಲಾ ಪ್ರಾರಂಭೋತ್ಸವ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ 2025 26 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು ಈ ಕಾರ್ಯಕ್ರಮದ ಮೊದಲು ಹೊಸತಾಗಿ ಸೇರ್ಪಡೆಗೊಂಡ ಮಕ್ಕಳನ್ನು ಹೂ ಕೊಟ್ಟು ಆಡಳಿತ ಮಂಡಳಿಯ ಸದಸ್ಯರು ಸ್ವಾಗತಿಸಿದರು ನಂತರ ದೀಪ ಬೆಳಗಿಸಿ ಹೊಸತಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಆರತಿ ಮಾಡುವ ಮೂಲಕ ಗೌರವಿಸಲಾಯಿತು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ನಾಗಭೂಷಣ ಮರಾಠೆ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಆಡಳಿತ ಮಂಡಳಿ ಸದಸ್ಯರಾದ ರಾಮ ಸೇರಿಗಾರ್ , ರವೀಂದ್ರನಾಥ ಜೋಶಿ ಉಪಸ್ಥಿತರಿದ್ದರು .ಇಲಾಖೆಯಿಂದ ಉಚಿತವಾಗಿ ಕೊಟ್ಟ ಪಠ್ಯಪುಸ್ತಕಗಳನ್ನು ಈ ಸಂದರ್ಭ ಎಲ್ಲಾ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರು ಸಹ ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮುಖ್ಯ ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿ ಪ್ರಸ್ತಾವನೆಯನ್ನು ಮಾಡಿದರು ಸಹ ಶಿಕ್ಷಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿ ಶಿಕ್ಷಕಿ ಸುನಿತಾ ಧನ್ಯವಾದ ನೀಡಿದರು ಮತ್ತು ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಸಿಹಿ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page