ಗಾಂಧಿ ಜಯಂತಿಯ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

ಶ್ರೀ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕುಂದೂರು ಗಾಂಧಿ ಜಯಂತಿಯ ಅಂಗವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಮೊದಲ ಅಂಗವಾಗಿ ಶಾಲಾ ಕೊಠಡಿ, ಆಟದ ಮೈದಾನ ಸ್ವಚ್ಛತಾ ಕಾರ್ಯಕ್ರಮವನ್ನು ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸೇರಿ ನಡೆಸಿಕೊಟ್ಟರು. ನಂತರದ ಸಭಾ ಕಾರ್ಯಕ್ರಮದಲ್ಲಿ ಗಾಂಧೀಜಿಯ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ಹಾರ ಹಾಕಲಾಯಿತು. ನಂತರ ಎಲ್ಲಾ ವಿದ್ಯಾರ್ಥಿಗಳು ಹಾಗೂ ಮುಖ್ಯ ಶಿಕ್ಷಕರಾದ ಜಗದೀಶ್ ಹೆಗ್ಡೆಯವರ ನೇತೃತ್ವದಲ್ಲಿ ಎಲ್ಲಾ ಶಿಕ್ಷಕರು ಸೇರಿ ಸರ್ವಧರ್ಮ ಪ್ರಾರ್ಥನೆಯನ್ನು ನಡೆಸಿಕೊಟ್ಟರು. 7ನೇ ತರಗತಿಯ ವಿದ್ಯಾರ್ಥಿ ಆದೀಶ್ ಗಾಂಧೀಜಿಯವರ ಜೀವನ ಚರಿತ್ರೆಯ ಕುರಿತು ಮಾಹಿತಿ ನೀಡಿದನು. ಕೊನೆಯಲ್ಲಿ ಹಿರಿಯ ಶಿಕ್ಷಕಿ ಗೀತಾ ಭಂಡಾರಿಯವರು ಭಾಗವಹಿಸಿದ ಎಲ್ಲರಿಗೂ ಧನ್ಯವಾದ ನೀಡಿದರು.



















