ಜಿಲ್ಲಾ ಮಟ್ಟದ ತ್ರೋಬಾಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಹಿಂದೂ ಪದವಿ ಪೂರ್ವ ಕಾಲೇಜು, ಶಿರ್ವದ ಜಂಟಿ ಆಶ್ರಯದಲ್ಲಿ ಸೆ. 19 ರಂದು ನಡೆದ ಜಿಲ್ಲಾಮಟ್ಟದ ಹುಡುಗರ ವಿಭಾಗದ ತ್ರೋಬಾಲ್ ಸ್ಪರ್ಧೆಯಲ್ಲಿ ಕಾರ್ಕಳದ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ. ಇದರಲ್ಲಿ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಅಜಿತ್ ಮತ್ತು ಸುಹಾನ್ ಇವರು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.
ಇವರ ಸಾಧನೆಗೆ ಶ್ರೀ ಭುವನೇಂದ್ರ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.


































