28.8 C
Udupi
Wednesday, May 6, 2026
spot_img
spot_img
HomeBlogಶ್ರೀ ಭುವನೇಂದ್ರ ರೆಸಿಡೆನ್ಶಿಯಲ್ ಸ್ಕೂಲ್ ಕಾರ್ಕಳ, 76ನೇ ಗಣರಾಜ್ಯೋತ್ಸವ ಆಚರಣೆ

ಶ್ರೀ ಭುವನೇಂದ್ರ ರೆಸಿಡೆನ್ಶಿಯಲ್ ಸ್ಕೂಲ್ ಕಾರ್ಕಳ, 76ನೇ ಗಣರಾಜ್ಯೋತ್ಸವ ಆಚರಣೆ

ದೇಶದ ಅಭಿವೃದ್ಧಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆ ಅಪಾರ: ಕೆ ವೆಂಕಟೇಶ್ ಪ್ರಭು

ಶ್ರೀ ಭುವನೇಂದ್ರ ರೆಸಿಡೆನ್ಶಿಯಲ್ ಸ್ಕೂಲ್, ಕಾರ್ಕಳ ಇಲ್ಲಿ 76ನೆಯ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಸಂಸ್ಥೆಯ ಸಂಚಾಲಕರಾದ ಶ್ರೀ ಕೆ. ವೆಂಕಟೇಶ್ ಪ್ರಭು ಅವರು ಧ್ವಜಾರೋಹಣವನ್ನು ನೆರವೇರಿಸಿದರು. ದೇಶದ ಅಭಿವೃದ್ದಿಯಲ್ಲಿ ಸಂವಿಧಾನ ನಿರ್ವಹಿಸಿದ ಪಾತ್ರವನ್ನು, ಸ್ವಾಂತಂತ್ರ್ಯ ಹೋರಾಟಗಾರರ ಕೊಡುಗೆಯನ್ನು ನೆನಪಿಸಿದರು. ದೇಶದ ಉನ್ನತಿಗಾಗಿ ಪ್ರತಿಯೊಬ್ಬ ಪ್ರಜೆಯು ದುಡಿದಾಗ ಅಮೂಲಾಗ್ರ ಬದಲಾವಣೆಯನ್ನು ತರಲು ಸಾಧ್ಯ ಎಂದು ಅವರು ವಿದ್ಯಾರ್ಥಿ ಗಳಿಗೆ ಕರೆಯನ್ನು ನೀಡಿದರು. ಸ್ವಾಗತವನ್ನು ಮಾಡಿದ ಸಂಸ್ಥೆಯ ಪ್ರಾಂಶುಪಾಲೆ ಪ್ರಮೀಳಾ ಕೋಟ್ಯಾನ್ ಮಾತನಾಡಿ, ಸಂವಿಧಾನ ಶಿಲ್ಪಿ ಡಾಕ್ಟರ್ ಭೀಮರಾವ್ ಅಂಬೇಡ್ಕರ್ ರವರ ಜೀವನ ಮಕ್ಕಳಿಗೆ ದಾರಿದೀಪವಾಗಬೇಕು ಎಂದರು. ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ಗಣರಾಜ್ಯೋತ್ಸವ ದಲ್ಲಿ ಪಾಲ್ಗೊಳ್ಳುವ ಅವಕಾಶ ಪಡೆದ ಸಂಸ್ಥೆಯ ವಿದ್ಯಾರ್ಥಿನಿ ಕುಮಾರಿ ಸ್ನಿಗ್ಧಇವರ ಸಾಧನೆಯ ಬಗ್ಗೆ ಪ್ರಸ್ತಾಪಿಸಿ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದರು.


ಒಂಭತ್ತನೆಯ ತರಗತಿಯ ವಿದ್ಯಾರ್ಥಿಳಾದ ಸಮರ್ಥ್ನ ನಾಯ್ಕ್, ಗಂಗಾ ಮಣಿರಾಜ್ ಶೆಟ್ಟಿ, ಶ್ರೇಯಾ ಹೊನ್ನೂರ ಗಣರಾಜ್ಯ ದಿನದ ಮಹತ್ವವನ್ನು ವಿವರಿಸಿದರು. ಭುವನ್ ನಿರೂಪಿಸಿ, ಪ್ರೇರಣಾ ಎ ದೇವಾಡಿಗ ವಂದಿಸಿದರು.
76 ನೇಯ ಗಣರಾಜ್ಯೋತ್ಸವದ ಪ್ರಯುಕ್ತ ಆಗಮಿಸಿದ ಎಲ್ಲರಿಗೂ ಸಿಹಿತಿಂಡಿಯನ್ನು ವಿತರಿಸಲಾಯಿತು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page