
ಕಾರ್ಕಳ:ಶ್ರೀ ಭುವನೇಂದ್ರ ರೆಸಿಡೆನ್ಸಿಯಲ್ ಸ್ಕೂಲ್ ಇದರ “ಬೆಳ್ಳಿ ಹಬ್ಬ ಕಾರ್ಯಕ್ರಮ ಜೂನ್ 7 ರಂದು ನಡೆಯಲಿದೆ.
ಉದ್ಘಾಟನಾ ಸಮಾರಂಭವು,ಬೆಳಿಗ್ಗೆ 11:30ಕ್ಕೆ ಎಸ್ ಬಿ.ಸಿ ಕ್ಯಾಂಪಸ್ ನ ಎಸ್.ಆರ್ ಸಭಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಮಂಗಳೂರು ಶ್ರೀ ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಜಿತಕಾಮನಂದಾಜಿ ಆಶೀರ್ವಚನ ನೀಡಲಿದ್ದಾರೆ. ಮಾಹೆ ವಿ.ವಿ ಸಹಕುಲಪತಿ ಡಾ. ಎಚ್.ಎಸ್ ಬಲ್ಲಾಳ್, ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಆಡಳಿತಾಧಿಕಾರಿ ಡಾ. ಕೆ ಶ್ರೀಧರ್ ಆರ್ ಪೈ, ಶ್ರೀ ಭುವನೇಂದ್ರ ಕಾಲೇಜು ಟ್ರಸ್ಟಿ ಆನಂದ ಜಿ.ಪೈ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಶ್ರೀ ಭುವನೇಂದ್ರ ಕಾಲೇಜಿನ ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷ ಸಿಎ ಶಿವಾನಂದ ಪೈ.ಬಿ ಅಧ್ಯಕ್ಷತೆ ವಹಿಸಲಿದ್ದಾರೆ.