77ನೇ ಸಂಭ್ರಮದ ಗಣರಾಜ್ಯೋತ್ಸವ

ಶ್ರೀ ಭುವನೇಂದ್ರ ರೆಸಿಡೆನ್ಶಿಯಲ್ ಸ್ಕೂಲ್, ಕಾರ್ಕಳದಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಗೌರವದಿಂದ ಆಚರಿಸಲಾಯಿತು.
ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲಾ ಸಂಚಾಲಕರಾದ ಕೆ. ವೆಂಕಟೇಶ್.ಪ್ರಭು ನೆರವೇರಿಸಿ , ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸವದ ಮಹತ್ವವನ್ನು ವಿವರಿಸಿದರು. ನಮ್ಮ ಸಂವಿಧಾನ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ನಾಗರಿಕರ ಕರ್ತವ್ಯಗಳ ಕುರಿತು ಅವರು ಪ್ರೇರಣಾದಾಯಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀಮತಿ ವೀಣಾ ಶೆಣೈರವರು ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಂದ ರಾಷ್ಟ್ರಭಕ್ತಿಗೆ ಸಂಬಂಧಿಸಿದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಈ ವಿಶೇಷ ದಿನದ ಕಾರ್ಯಕ್ರಮದಲ್ಲಿ ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.



















