
ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ದಿನಾಂಕ 15/08/2025 ರಂದು 79 ನೇ ಸ್ವಾತಂತ್ರ ದಿನಾಚರಣೆಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕಾರ್ಕಳ ಗ್ರಾಮೀಣ ಉಪನಿರೀಕ್ಷಕ ಪೊಲೀಸ್ ಅಧಿಕಾರಿಯಾದ ಶ್ರೀಯುತ ಪ್ರಸನ್ನ ಎಂ.ಎಸ್ ಇವರು ಆಗಮಿಸಿ ಧ್ವಜಾರೋಹಣವನ್ನು ನೆರವೇರಿಸಿ, ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿದರು .ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ನೃತ್ಯ, ಹಾಡು, ಪ್ರಹಸನ ಹೀಗೆ ವಿವಿಧ ರೀತಿಯ ದೇಶಭಕ್ತಿಯ ಪ್ರತೀಕವಾದ ಕಾರ್ಯಕ್ರಮಗಳನ್ನು ನೀಡಿ ಮನರಂಜಿಸಿದರು. ಪ್ರಾಥಮಿಕ ಶಾಲಾ ಮಕ್ಕಳು ವಿವಿಧ ದೇಶಭಕ್ತರ ವೇಷಣಭೂಷಣಗಳನ್ನು ಧರಿಸಿ ಕಾರ್ಯಕ್ರಮಕ್ಕೆ ಮೆರುಗನ್ನು ನೀಡಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಯುತ ಡಾ. ಪ್ರಶಾಂತ್ ಹೆಗ್ಡೆ, ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಆರ್ .ಕಾಮತ್, ಶಿಕ್ಷಕ_ ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿ ತಿಂಡಿಯನ್ನು ವಿತರಿಸಲಾಯಿತು.ಈ ಕಾರ್ಯಕ್ರಮವನ್ನು 9ನೇ ತರಗತಿಯ ವಿದ್ಯಾರ್ಥಿ ತೇಜಸ್ ವಿ.ಶೇರಿಗಾರ್ ನಿರೂಪಿಸಿದರು.