
ಕಾರ್ಕಳ: ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರದಲ್ಲಿ ದಿನಾಂಕ 25/ 01/2025 ರಂದು ಪೋಷಕ ಪ್ರತಿಭಾ ಸ್ಪರ್ಧೆಯನ್ನು ಆಯೋಜಿಸಲಾಯಿತು. ಪೋಷಕರು ತಮ್ಮ ದೈನಂದಿನ ದಿನಚರಿಯಲ್ಲಿ ತಮ್ಮದೇ ಆದ ಕೆಲಸ, ಕಾರ್ಯ, ಜವಾಬ್ದಾರಿ ರಿಗಳಲ್ಲಿ ತೊಡಗಿಕೊಂಡು ತಮ್ಮಲ್ಲಿರುವ ಅಧಮ್ಯ ಪ್ರತಿಭೆಯನ್ನು ಅನಾವರಣಗೊಳಿಸಲು ಸಾಧ್ಯವಾಗದ ಈ ಸನ್ನಿವೇಶದಲ್ಲಿ ಶ್ರೀ ಶ್ರೀ ರವಿಶಂಕರ್ ವಿದ್ಯಾ ಮಂದಿರವು ಪೋಷಕರಿಗಾಗಿಯೇ ಒಂದು ವಿಶಿಷ್ಟವಾದ ಕಾರ್ಯಕ್ರಮವನ್ನು ಕೈಗೊಂಡು ವಿವಿಧ ಸ್ಪರ್ಧೆಗಳನ್ನು ಆಯೋಜಿಸಿತು. ಪೋಷಕರು ಅತಿ ಉತ್ಸಾಹದಿಂದ ನೃತ್ಯ ,ಸಂಗೀತ, ಹೂಗುಚ್ಛ ತಯಾರಿಕೆ ಒಲೆರಹಿತ ಅಡಿಗೆ ತಯಾರಿಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿಸುವಲ್ಲಿ ತಮ್ಮ ಅಮೂಲ್ಯ ಕೊಡುಗೆಯನ್ನು ನೀಡಿದರು.
ಈ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಶ್ರೀಮತಿ ಸುನಿತಾ ಉದಯಕುಮಾರ್ ಹಾಗೂ ಡಾ. ಹರ್ಷಕಾಮತ್ ರವರು ಆಗಮಿಸಿ, ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದರು. ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಸೋನಾಲ್ ಆರ್.ಕಾಮತ್ ವಿಜೇತರಿಗೆ ಹಾಗೂ ಭಾಗವಹಿಸಿದ ಎಲ್ಲಾ ಸ್ಪರ್ಧಾಳುಗಳಿಗೆ ಬಹುಮಾನ ವಿತರಿಸಿ ಅಭಿನಂದಿಸಿದರು.ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರು, ಪೋಷಕರು, ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.





















