
ಕಾರ್ಕಳ : ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ತಾರೀಕು 11/ 12 /2025 ರಂದು ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಿದ್ದು, ಈ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿ- ವಿದ್ಯಾರ್ಥಿನಿಯರು ವಿವಿಧ ಸ್ಪರ್ಧಿಗಳಲ್ಲಿ ವಿಜೇತರಾದ ಮಕ್ಕಳನ್ನ ಅಭಿನಂದಿಸಲಾಯಿತು.
ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಪ್ರಶಾಂತ್ ಹೆಗ್ಡೆ, ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಆರ್. ಕಾಮತ್, ಉಪ ಪ್ರಾಂಶುಪಾಲರಾದ ಶ್ರೀಮತಿ ಸುಜಾತ.ಕೆ ಮಕ್ಕಳಿಗೆ ಬಹುಮಾನವನ್ನು ನೀಡಿ ಪ್ರೋತ್ಸಾಹಿಸಿದರು. ತಾರೀಕು 12/ 12 /2025ರಂದು ನಡೆದ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮದಲ್ಲಿ ಮಾನ್ಯ ತಹಶೀಲ್ದಾರರಾದ ಶ್ರೀ ಪ್ರದೀಪ್ ಆರ್ ಹಾಗೂ ಉಪ ಅರಣ್ಯ ಅಧಿಕಾರಿಗಳಾದ ಶ್ರೀ ಸುಧೀರ್ ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದು, ಮಕ್ಕಳಿಗೆ ಸಮಯೋಚಿತ ಸ್ಪೂರ್ತಿದಾಯಕ ಮಾತುಗಳನ್ನು ಹೇಳುವುದರ ಜೊತೆಗೆ ಶಾಲೆಯ ಅಭಿವೃದ್ಧಿಗೆ ಹಾರೈಸಿದರು. ನಂತರ ಶಾಲಾ ಪ್ರಾಂಶುಪಾಲರು ವಾರ್ಷಿಕ ವರದಿಯನ್ನು ವಾಚಿಸಿದರು. ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಪ್ರಶಾಂತ್ ಹೆಗ್ಡೆಯವರು ಅಧ್ಯಕ್ಷೀಯ ಭಾಷಣದಲ್ಲಿ ಶಾಲಾ ಅಭಿವೃದ್ಧಿಯ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದರು. ಈ ಸಭಾರಂಭದಲ್ಲಿ ಕಳೆದ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಸಾಧಕ ಮಕ್ಕಳಿಗೆ ಅಭಿನಂದಿಸಲಾಯಿತು. ಈ ಸಭಾ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಶ್ರೀಮತಿ ಸೋನಾಲ್ ಆರ್.ಕಾಮತ್, ಪ್ರಾಂಶುಪಾಲರಾದ ಶ್ರೀಮತಿ ಸುಜಾತ ಕೆ, ಶಾಲಾ ಅಧ್ಯಕ್ಷರಾದ ಶ್ರೀಯುತ ಪ್ರಶಾಂತ್ ಹೆಗ್ಡೆ, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ವಿನಾಯಕ ಜಿ.ಕುಡ್ವ ಇವರು ಉಪಸ್ಥಿತರಿದ್ದರು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಆರ್ಟ್ ಆಫ್ ಲಿವಿಂಗ್ ನ ವಿಭಿನ್ನ ಯೋಗ ಪ್ರಕ್ರಿಯೆಯಾದ ಪ್ರಜ್ಞಾ ಯೋಗದ ಪ್ರದರ್ಶನವು ನಡೆಯಿತು. ಈ ಕಾರ್ಯಕ್ರಮವನ್ನು ಬೆಂಗಳೂರು ಶ್ರೀ ಶ್ರೀ ರವಿಶಂಕರ ಟ್ರಸ್ಟ್ ನಿಂದ ಆಗಮಿಸಿದ ಅಂತರಾಷ್ಟ್ರೀಯ ಯೋಗ ತಜ್ಞರಾದ ರಮ್ಯ ರಾಜಶೇಖರ್ ಹಾಗೂ ಶಾರದ ಇವರು ನಡೆಸಿಕೊಟ್ಟರು.





