
ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ದಿನಾಂಕ 14/05/2026 ರಿಂದ 17/05/2026 ರವರೆಗೆ ದಿವ್ಯ ಶ್ರದ್ಧಾ ತರಬೇತಿ ಕಾರ್ಯಾಗಾರವು ಯಶಸ್ವಿಯಾಗಿ ನಡೆಯಿತು. ಬೆಂಗಳೂರು ಟ್ರಸ್ಟ್‌ನ ಶ್ರೀಮತಿ ನಮಿತಾ ಶಂಕರ್ ಡೋಂಗ್ರೆ ಹಾಗೂ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಕಾಮತ್ ಅವರು ಶ್ರದ್ಧಾ ತರಬೇತುದಾರರಾಗಿ ಕಾರ್ಯಾಗಾರವನ್ನು ನಡೆಸಿ ಶಿಕ್ಷಕರಿಗೆ ತರಬೇತಿಯನ್ನು ನೀಡಿದರು.

ಈ ಕಾರ್ಯಾಗಾರದಲ್ಲಿ ಶಾಲಾ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ದಿನೇಶ್ ಕಾಮತ್, ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಆರ್. ಕಾಮತ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಶಾಲೆಯ ಅಧ್ಯಕ್ಷರಾದ ಡಾ. ಪ್ರಶಾಂತ್ ಹೆಗ್ಡೆ ಅವರು ಕಾರ್ಯಕ್ರಮಕ್ಕೆ ಬೆಂಬಲ ಸೂಚಿಸಿ, ಪೂಜ್ಯ ಗುರುದೇವ್ ಶ್ರೀ ಶ್ರೀ ರವಿಶಂಕರ ಜೀ ಅವರ ಆಶೀರ್ವಾದದಿಂದ ಪ್ರೇರಿತವಾದ ಅತ್ಯುತ್ತಮ ಬೋಧನಾ ವಿಧಾನಗಳನ್ನು ಶ್ಲಾಘಿಸಿದರು.
ಶಿಕ್ಷಕರ ಸಾಮರ್ಥ್ಯವನ್ನು ವೃದ್ಧಿಸಿ, ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ಸಮಗ್ರ ಕಲಿಕಾ ವಾತಾವರಣವನ್ನು ವಿದ್ಯಾರ್ಥಿಗಳಿಗೆ ಒದಗಿಸುವ ಉದ್ದೇಶದಿಂದ SSRVM ಬೆಂಗಳೂರು ಟ್ರಸ್ಟ್ ವತಿಯಿಂದ ಪ್ರತಿವರ್ಷ ಈ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ.



























