
ಕಾರ್ಕಳ: ದಿನಾಂಕ 05/06/2026 ರಂದು ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಉತ್ಸಾಹದಿಂದ ಆಚರಿಸಲಾಯಿತು. ಈ ದಿನಾಚರಣೆಯ ಅಂಗವಾಗಿ ಮಕ್ಕಳಿಗೆ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಕಾಮತ್ ಅವರು ಮಾಹಿತಿ ನೀಡಿದರು.
ಮಕ್ಕಳು ಸಿದ್ಧಪಡಿಸಿಕೊಂಡು ಬಂದ ವಿವಿಧ ಬೀಜಗಳನ್ನು ಬಿತ್ತನೆ ಮಾಡಲಾಯಿತು. ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ Seed Bomb ತಯಾರಿಸುವ ಚಟುವಟಿಕೆಯನ್ನು ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳು ಈ ಚಟುವಟಿಕೆಯಲ್ಲಿ ಆಸಕ್ತಿಯಿಂದ ಭಾಗವಹಿಸಿದರು. ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಪರಿಸರ ಸ್ನೇಹಿ ಗಿಡಗಳನ್ನು ನೆಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸಹಕಾರಿಯಾಯಿತು.
































