
ವಿಶಿಷ್ಟ ಕಂಠದ ಬಹುಭಾಷಾ ಗಾಯಕಿ ಹಾಗೂ ನಿರೂಪಕಿಯಾದ ಮಹಿಮಾ ಬಜಗೋಳಿ ಅವರನ್ನು ಹಲವಾರು ವರ್ಷಗಳಿಂದ ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಅಪಾರ ಸಾಧನೆಗಾಗಿ “ಚಂದನ ಸಂಗೀತ ರತ್ನ ಪ್ರಶಸ್ತಿ” ನೀಡಿ ಗೌರವಿಸಲಾಯಿತು.
ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಜರುಗಿದ ಚಂದನ ಸಾಹಿತ್ಯ ಸಂಗೀತ ಸಂಭ್ರಮೋತ್ಸವ-2025 ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್. ಭೀಮರಾವ್ ವಾಷ್ಠರ್ ಸುಳ್ಯ, ಖ್ಯಾತ ಸಾಹಿತಿಗಳಾದ ಪ್ರಭಾಕರ ಶಿಶಿಲ,ನಿವೃತ್ತ ತಾಂತ್ರಿಕ ಕೃಷಿ ಅಧಿಕಾರಿಗಳಾದ ಮೋಹನ್ ನಂಗಾರು, ಹಾ ಮ ಸತೀಶ್ ಬೆಂಗಳೂರು, ನಾರಾಯಣ ರೈ ಕುಕ್ಕುವಳ್ಳಿ,ಶ್ರೀ ಶ್ರೀ ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿ,
ಹಾಗೂ ಚಿತೇಶ್ ಸಂಗೀತ ಬಳಗ ಸುಳ್ಯ ದ ಸಂಚಾಲಕರಾದ ಪೆರುಮಾಳ್ ಲಕ್ಷ್ಮಣ್ ಇನ್ನಿತರ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.