
ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್ ಇಂದು ಬೆಳಿಗ್ಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್ ರವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಸಿಜಿ ನಡೆಸಲಾಗಿದ್ದು, ಅಂಜಿಯೋಗ್ರಾಮ್ ಪರೀಕ್ಷೆಗೆ ಒಳಗಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇವರು ಕಳೆದ ತಿಂಗಳು ಚೆನ್ನೈನಲ್ಲಿ ನಡೆದ ತಮ್ಮ ಸಂಗೀತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.