
ನವದೆಹಲಿ: ಇಂದು ನಿಗಮ್ ಬೋಧ ಘಾಟ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸಿಖ್ ಸಂಪ್ರದಾಯದಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನಡೆಯಿತು.
ಡಾ. ಸಿಂಗ್ ಅವರಿಗೆ ಮೂರು ಸೇನಾ ಪಡೆಗಳು ಗೌರವ ಸಮರ್ಪಣೆ ಮಾಡಿದ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛವನ್ನಿರಿಸಿ ಗೌರವ ನಮನ ಸಲ್ಲಿಸಿ ಸಿಖ್ ಸಂಪ್ರದಾಯದ ವಿಧಿವಿಧಾನದಂತೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಉಪರಾಷ್ಟ್ರಪತಿ ಜಗದೀಪ್ ಧನಕರ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಹೆಚ್.ಸಿ.ಮಹದೇವಪ್ಪ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಆರ್.ವಿ.ದೇಶಪಾಂಡೆ ಪಾಲ್ಗೊಂಡಿದ್ದರು.




