
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾದ ಘಟನೆ ಸಚಿವೆ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದರು.
ಅಪಘಾತಕ್ಕೆ ಸಂಬಂಧಿಸಿದಂತೆ ನಿನ್ನೆ ಕಾರು ಚಾಲಕನ ವಿರುದ್ಧ ದೂರು ದಾಖಲಾಗಿದ್ದು, ಇದೀಗ ಕಾರು ಚಾಲಕ ಟ್ರಕ್ ಚಾಲಕನ ವಿರುದ್ಧ ದೂರು ನೀಡಿದ್ದಾರೆ. ಟ್ರಕ್ ಚಾಲಕ ಓವರ್ ಟೆಕ್ ಮಾಡುವ ಪ್ರಯತ್ನದಲ್ಲಿ ಅಪಘಾತ ಸಂಭವಿಸಿದೆ ಎಂದು ದೂರಿನಲ್ಲಿ ದಾಖಲಾಗಿದೆ.
ಟ್ರಕ್ ಚಾಲಕ ಯಾವುದೇ ಮುನ್ಸೂಚನೆ ನೀಡದೆ ಎಡಬದಿಗೆ ಬಂದ ಕಾರಣ, ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ಟ್ರಕ್ ಚಾಲಕನ ಅಜಾಗರೂಕ ಚಾಲನೆಯೆ ಘಟನೆಗೆ ಕಾರಣ ಎಂದು ದೂರಿನಲ್ಲಿ ಮಾಹಿತಿ ನೀಡಲಾಗಿದೆ.































































































































