
ನವದೆಹಲಿ: ರೆಪೋ ದರವನ್ನು ಸತತ ಎರಡನೇ ಬಾರಿ ಇಳಿಕೆ ಮಾಡಿದ ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 25 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದರಿಂದ ಸಾಲ ಮತ್ತು ಇಎಂಐಗಳ ಬಡ್ಡಿ ದರವೂ ಇಳಿಕೆಯಾಗುವ ಸಾಧ್ಯತೆಯಿದೆ.
ಆರ್‌ಬಿಐ ಐದು ವರ್ಷಗಳ ಬಳಿಕ ಈ ಫೆಬ್ರವರಿಯಲ್ಲಿ ರೆಪೋ ದರವನ್ನು ಇಳಿಕೆ ಮಾಡಿತ್ತು. 25 ಬೇಸಿಸ್ ಪಾಯಿಂಟ್ ಇಳಿಕೆ ಮಾಡಿದ್ದರಿಂದ ರೇಪೋ ದರ 6.25% ಕ್ಕೆ ತಗ್ಗಿದ್ದು ಇದರ ಬಿಸಿ ಬ್ಯಾಂಕ್‍ಗಳಿಗೆ ತಟ್ಟಲಿದೆ. ಈ ದರ ಕಡಿತದೊಂದಿಗೆ ಗೃಹ ಸಾಲದ ಬಡ್ಡಿದರಗಳು ಮತ್ತೊಮ್ಮೆ 8% ಕ್ಕಿಂತ ಕೆಳಗೆ ಇಳಿಯುವ ಸಾಧ್ಯತೆಯಿದೆ.
ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ, ಹಣಕಾಸು ನೀತಿ ಸಮಿತಿಯ ವರದಿಯನ್ನು ಬಿಡುಗಡೆ ಮಾಡಿ ರೆಪೋ ಕಡಿತದ ನಿರ್ಧಾರ ಪ್ರಕಟಿಸಿದರು.
ರೆಪೋ ದರ ಎಂದರೆ:
ವಾಣಿಜ್ಯ ಬ್ಯಾಂಕ್‌ಗಳು ರಿಸರ್ವ್ ಬ್ಯಾಂಕ್‍ನಿಂದ ಪಡೆಯುವ ಅಲ್ಪಾವಧಿ ಸಾಲದ ಮೇಲಿನ ಬಡ್ಡಿ ದರಕ್ಕೆ ರೆಪೋ ದರ ಎನ್ನುತ್ತಾರೆ. ರೆಪೋ ದರ ಕಡಿಮೆಯಾದರೆ ಬ್ಯಾಂಕ್‌ಗಳು ಕಡಿಮೆ ಬಡ್ಡಿ ದರದಲ್ಲಿ ಹೆಚ್ಚಿನ ಹಣವನ್ನು ಪಡೆಯಬಹುದು. ಬ್ಯಾಂಕ್‍ಗಳು ತಮ್ಮಲ್ಲಿ ಹಣದ ಕೊರತೆಯಾದಾಗ ಆರ್‌ಬಿಐನಿಂದ ಹಣ ಪಡೆಯುತ್ತಿರುತ್ತವೆ. ರೆಪೋ ರೇಟ್ ಜಾಸ್ತಿ ಇದ್ದರೆ ಬ್ಯಾಂಕ್‌ಗಳು ಸಾಲದ ಮೇಲಿನ ಬಡ್ಡಿ ದರವನ್ನು ಏರಿಕೆ ಮಾಡುತ್ತದೆ. ಇದರಿಂದ ವಾಹನ ಸಾಲ, ಗೃಹ ಸಾಲ ಇತ್ಯಾದಿ ಸಾಲಗಳ ಬಡ್ಡಿ ದರ ಏರುತ್ತದೆ.
ರಿವರ್ಸ್ ರೆಪೋ:
ವಾಣಿಜ್ಯ ಬ್ಯಾಂಕುಗಳು ಆರ್‌ಬಿಐನಲ್ಲಿ ಇಡುವ ಠೇವಣಿಗಳ ಮೇಲೆ ಪಡೆಯುವ ಬಡ್ಡಿದರವೇ ವಿರುದ್ಧ ರೆಪೋ ರೇಟ್. ಆರ್‍ಐನಲ್ಲಿ ಠೇವಣಿ ಇಡುವುದು ಬ್ಯಾಂಕುಗಳಿಗೆ ಸುರಕ್ಷಿತ. ರಿವರ್ಸ್ ರೆಪೋ ದರ ಹೆಚ್ಚಾದಾಗ ಬ್ಯಾಂಕುಗಳು ಹೆಚ್ಚಿನ ಮೊತ್ತವನ್ನು ಆರ್‌ಬಿಐಗೆ ವರ್ಗಾಯಿಸುತ್ತದೆ.