
ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ ರಾಜ್ ಕುಂದ್ರಾ ಅವರು ಅಕ್ರಮ ಹಣ ವರ್ಗಾವಣೆ ಪ್ರಕರಣ ಎದುರಿಸುತ್ತಿದ್ದು ಈಗಾಗಲೇ ಅವರ ಮನೆಯ ಮೇಲೆ ಜಾರಿ ನಿರ್ದೇಶನ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ಕುರಿತು ಪ್ರತಿಕ್ರಿಸಿದ ರಾಜ್ ಕುಂದ್ರಾ ತಮ್ಮ ವಿರುದ್ಧ ಬಂದಿರುವ ಆರೋಪ ಸುಳ್ಳು ಎಂಬುದು ಮುಂದೊಂದು ದಿನ ಸಾಬೀತಾಗುತ್ತದೆ. ಈ ಪ್ರಕರಣದಲ್ಲಿ ಪತ್ನಿ ಹೆಸರನ್ನು ಎಳೆದು ತರಬೇಡಿ ಎಂದು ಮನವಿ ಮಾಡಿದ್ದಾರೆ.ಇದು ಯಾರಿಗೆಲ್ಲ ಸಂಬಂಧಿಸಿದೆಯೋ ಅವರಿಗೆ ನೇರವಾಗಿ ಹೇಳುತ್ತಿದ್ದೇನೆ. ಕಳೆದ ನಾಲ್ಕು ವರ್ಷಗಳಿಂದ ನಡೆಯುತ್ತಿರುವ ತನಿಖೆಗೆ ನಾನು ಸಹಕರಿಸುತ್ತಿದ್ದೇನೆ. ಹಣ ವರ್ಗಾವಣೆ, ಅಶ್ಲೀಲ ಸಿನಿಮಾ ನಿರ್ಮಾಣ ಮತ್ತಿತ್ಯಾದಿ ಪ್ರಕರಣಗಳನ್ನು ಇದು ಒಳಗೊಂಡಿದೆ. ಯಾವುದನ್ನು ಸೆನ್ಸೇಷನ್ ಮಾಡಿದರೂ ಸತ್ಯ ಮರೆ ಆಗುವುದಿಲ್ಲ. ಕೊನೆಯಲ್ಲಿ ಸತ್ಯ ಹೊರಬರಲೇಬೇಕು. ಆದರೆ ಸಂಬಂಧಿಸದೇ ಇಲ್ಲದ ವಿಚಾರಗಳಲ್ಲಿ ನನ್ನ ಪತ್ನಿಯ ಹೆಸರನ್ನು ಎಳೆದು ತರಬೇಡಿ’ ಎಂದು ಅವರು ಕೋರಿಕೊಂಡಿದ್ದಾರೆ.



















