
ಬೆಂಗಳೂರು: ಸಿ.ಟಿ ರವಿ- ಲಕ್ಷ್ಮಿ ಹೆಬ್ಬಾಳ್ಕರ್ ಕೇಸ್ ಕುರಿತು ಮಹಾಜರಿಗೆ ಅನುಮತಿ ಕೇಳಿದ ಪೊಲೀಸರ ವಿರುದ್ಧ ಸಭಾಪತಿ ಬಸವರಾಜ ಹೊರಟ್ಟಿ ಗರಂ ಆಗಿದ್ದು ಸದನದ ಒಳಗೆ ನಡೆಯುವ ಘಟನೆಗಳಿಗೆ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಹೇಳಿದ್ದಾರೆ.
ಸಿ..ಟಿ ರವಿ– ಲಕ್ಷ್ಮಿ ಹೆಬ್ಬಾಳ್ಕರ್ ಕೇಸ್ ಮುಗಿದ ಅಧ್ಯಾಯ. ಡಿ.19ರಂದೇ ಸದನದಲ್ಲಿ ರೂಲಿಂಗ್ ಕೊಟ್ಟಿದ್ದು ಅನಿರ್ದಿಷ್ಟಾವಧಿವರೆಗೆ ಮುಂದೂಡಿಕೆ ಆಗಿದೆ. ಮಹಜರು ಮಾಡ್ತೀನಿ ಅಂತಾ ಪೊಲೀಸರು ಕೇಳಿದ್ರು, ಅದಕ್ಕೆ ನಾವು ಅನುಮತಿ ಕೊಟ್ಟಿಲ್ಲ, ಬಾಗಿಲು ಹಾಕಿದ್ದೇವೆ. ಸದನದಲ್ಲಿ ಮಹಜರು ಮಾಡಲು ಬರಲ್ಲ ಅಂತಾ ಪೊಲೀಸರಿಗೆ ತಿಳಿಸಿದ್ದೇನೆ. ಅವರು ಹೊರಗಿನ ವಿಚಾರಕ್ಕೆ ದೂರು ಕೊಟ್ಟಿದ್ರೆ, ಅದರ ಬಗ್ಗೆ ನಾವು ಹಸ್ತಕ್ಷೇಪ ಮಾಡಲ್ಲ. ಆದ್ರೆ ಆ ದಿನ ರಾತ್ರಿ 1 ಗಂಟೆ ತನಕವೂ ಸಿ.ಟಿ ರವಿ ಜೊತೆ ಸಂಪರ್ಕದಲ್ಲಿ ಇದ್ದೆ. ಪೊಲೀಸ್ ಆಯುಕ್ತರ ಜೊತೆಗೆ ಮಾತನಾಡಿ ಎಚ್ಚರಿಕೆ ಕೊಟ್ಟಿದ್ದೆ. ಏನಾದರೂ ಆದ್ರೆ ಸುಮ್ಮನೆ ಬಿಡಲ್ಲ ಅಂತ ಹೇಳಿದ್ದೆ. ಬೆಳಗ್ಗೆ ತನಕವೂ ನಾನು ಟ್ರ‍್ಯಾಕ್ ಮಾಡಿದ್ದೆ, ಬೆಳಗ್ಗೆ 5 ಗಂಟೆಗೆ ಎಸ್ಪಿ ಜೊತೆಗೂ ಕೂಡ ಮಾತಾಡಿದ್ದೆ. ಅಲ್ಲದೇ ಈಗಾಗಲೇ ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.