
ಬೆಂಗಳೂರು: ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಸುದ್ದಿಗಾರರೊಂದಿಗೆ ಮಾತನಾಡಿ ಸಿಎಂ ಸಿದ್ದರಾಮಯ್ಯ ಗಟ್ಟಿಮುಟ್ಟಾಗಿದ್ದಾರೆ, ಒಳ್ಳೆಯ ಮಾರ್ಗದರ್ಶನ ಮಾಡ್ತಾ ಇದ್ದಾರೆ. ಒಳ್ಳೆಯ ಅಡಳಿತ ಕೊಡ್ತಾ ಇದ್ದಾರೆ. ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ. ಕೆಪಿಸಿಸಿ ಅಧ್ಯಕ್ಷರ ಹುದ್ದೆಯೂ ಖಾಲಿ ಇಲ್ಲ. ಇದು ಅಪ್ರಸ್ತುತವಾದ ವಿಚಾರ ಎಂದು ಹೇಳಿದರು.
ವಿಪಕ್ಷಗಳು ಮೊಸರಿನಲ್ಲಿ ಕಲ್ಲುವ ಹುಡುಕುವ ಕೆಲಸ ಮಾಡ್ತಾ ಇದ್ದಾರೆ. ಕರ್ನಾಟಕ ಜನ ಅವರಿಗೆ ಶಾಪ ಹಾಕುತ್ತಿದ್ದಾರೆ. ಮೊದಲು ಅವರು ಸರಿ ಮಾಡಿಕೊಳ್ಳಲಿ. ನವೆಂಬರ್ ಬಂತು ಕ್ರಾಂತಿಯೂ ಇಲ್ಲ, ಬ್ರಾಂತಿಯೂ ಇಲ್ಲ. ಬಿಹಾರ ಎಲೆಕ್ಷನ್ ನಡೆಯುತ್ತಿದೆ. ಎಲೆಕ್ಷನ್ ಬಳಿಕ ರಾಹುಲ್ ಗಾಂಧಿ ಪಿಎಂ ಆಗ್ತಾರೆ. ಬಿಹಾರ ಎಲೆಕ್ಷನ್‌ಗೂ ಇದಕ್ಕೂ ಸಂಬಂಧವಿಲ್ಲ.
ಯತೀಂದ್ರ ಸಿದ್ದರಾಮಯ್ಯ ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂದು ನನಗೆ ಗೊತ್ತಿಲ್ಲ. ಹೈಕಮಾಂಡ್ ಅವರು ಅವರ ಕೆಲಸ ಮಾಡ್ತಾ ಇದ್ದಾರೆ ಎಂದು ತಿಳಿಸಿದರು. ಅಲ್ಲದೆ ಸಿಎಂ ಹುದ್ದೆ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡದಂತೆ ನನ್ನ ಸಹೋದ್ಯೋಗಿಗಳಿಗೆ ನಾನು ಮನವಿ ಮಾಡ್ತೇನೆ ಎಂದು ಖಂಡ್ರೆ ಮನವಿ ಮಾಡಿದರು.



















































