
ನವದೆಹಲಿ: ಕಳೆದ ವರ್ಷ ತಮಿಳುನಾಡು ಉಪ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರ ಪುತ್ರ ಉದಯ ನಿಧಿ ಸ್ಟಾಲಿನ್ ‘ಸನಾತನ ಧರ್ಮ ಒಂದು ರೋಗವಾಗಿದ್ದು ಅದನ್ನು ಬೇರು ಸಮೇತ ಕಿತ್ತು ಹಾಕಬೇಕು’ ಎಂದು ಹೇಳಿಕೆ ನೀಡಿದ್ದು ಹೀಗಾಗಿ ಅವರ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಗಳನ್ನು ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಣೆ ಮಾಡಿದೆ.
ನ್ಯಾಯಮೂರ್ತಿ ಬೇಲ ಎಂ ತ್ರಿವೇದಿ ಮತ್ತು ನ್ಯಾಯಮೂರ್ತಿ ಪ್ರಸನ್ನ ಬಿ ವರಲೆ ಅವರನ್ನೊಳಗೊಂಡ ಪೀಠವು ಸಂವಿಧಾನದ 32ನೇ ವಿಧಿಯಡಿ ರಿಟ್ ಅರ್ಜಿಗಳನ್ನು ಪುರಸ್ಕರಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿ ನಿರಾಕರಿಸಿದೆ.





















