
ಮೂಡುಬಿದಿರೆ: ಎಕ್ಸಲೆಂಟ್ ಸಿಬಿಎಸ್ಇ ಶಾಲೆಯಲ್ಲಿ ವೈದ್ಯ ದಿನಾಚರಣೆಯನ್ನು ನೆರವೇರಿಸಲಾಯಿತು. ಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನದೊಂದಿಗೆ ವೈದ್ಯರಿಗೆ ಗೌರವವನ್ನು ಅರ್ಪಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷರಾಗಿ ಯುವರಾಜ್ ಜೈನ್ ರವರು ಉಪಸ್ಥಿತರಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿಗಳ ಜೀವನದ ಘಟನೆಗಳನ್ನು ಸ್ಮರಿಸುವ
ಮೂಲಕ ವೈದ್ಯ ವೃತ್ತಿಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಡಾಕ್ಟರ್ ಪುನೀತ್ ರವರು ಮಾತನಾಡಿ ‘ ಸಮಯ ನಿಷ್ಠೆಯಿಂದ ಕಾರ್ಯಪ್ರವೃತ್ತನಾಗುವವನೇ ನಿಜವಾದ ವೈದ್ಯ ‘ ಎಂದು ಹೇಳುವ ಮೂಲಕ ವೈದ್ಯರಾಗಬೇಕೆಂಬ ಕನಸನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ವೈದ್ಯವೃತ್ತಿಯ ಘನತೆಯ ಕುರಿತು ಸಂದೇಶವನ್ನು ನೀಡಿದರು.
ಈ ಸಂದರ್ಭದಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ ಮುಖ್ಯಸ್ಥರಾಗಿರುವ ವಿಶ್ವರಾಜ್ , ಎಕ್ಸಲೆಂಟ್ ಸಿಬಿಎಸ್ಇ ಶಾಲೆಯ ಪ್ರಾಂಶುಪಾಲರಾದ ಶ್ರೀಪ್ರಸಾದ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿನಿ ಇಷಿತ ನೆರವೇರಿಸಿದರು. ವಿದ್ಯಾರ್ಥಿನಿಯಾದ ಪ್ರಿಯಾಂಕರವರು ಸ್ವಾಗತಿಸಿ, ಆರವ್ ಕಿರಣ್ ವಂದಿಸಿದರು.