
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಇವರ ವತಿಯಿಂದ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿ ವಿತರಣಾ ಕಾರ್ಯಕ್ರಮ ನಡೆಯಿತು.
ರೋಟರಿ ಕ್ಲಬ್ ನ ನೂತನ ಅಧ್ಯಕ್ಷರಾದ ಸುರೇಂದ್ರ ನಾಯಕ್, ನಿಕಟಪೂರ್ವ ಅಧ್ಯಕ್ಷರಾಗಿರುವ ಉಪೇಂದ್ರ ವಾಗ್ಲೆ, ನಿಕಟಪೂರ್ವ ಕಾರ್ಯದರ್ಶಿ ಪ್ರಶಾಂತ್ ಜೈ ಹಾಜರಿದ್ದು ಮಕ್ಕಳಿಗೆ ಶುಭ ಹಾರೈಸಿದರು. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿರುವ ಶ್ರೀರಾಮಚಂದ್ರ ನಾಯಕ್, ಉಪಾಧ್ಯಕ್ಷೆ ಶಾರದಾ, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿರುವ ಡಾ. ಸುಕೇಶ್ ನಾಯಕ್, ಉಪಾಧ್ಯಕ್ಷರಾಗಿರುವ ರವೀಂದ್ರ ಎಸ್ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಕಿ ಸಿಂತಿಯಾ ಕಾರ್ಯಕ್ರಮ ನಿರೂಪಿಸಿ, ಮುಖ್ಯ ಶಿಕ್ಷಕಿ ಜೆಸಿಂತಾ ಸ್ವಾಗತಿಸಿದರು, ಶಿಕ್ಷಕಿ ಮುಕ್ತ ವಂದಿಸಿದರು.






















































