31.2 C
Udupi
Saturday, April 11, 2026
spot_img
spot_img
HomeBlogಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ, ಕೆರ್ವಾಶೆ: ಸಮುದಾಯದತ್ತ ಶಾಲಾ ಕಾರ್ಯಕ್ರಮ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ, ಕೆರ್ವಾಶೆ: ಸಮುದಾಯದತ್ತ ಶಾಲಾ ಕಾರ್ಯಕ್ರಮ

ಸ. ಕಿ.ಪ್ರಾ.ಶಾಲೆ ಬಂಗ್ಲೆಗುಡ್ಡೆ, ಕೆರ್ವಾಶೆ ಇಲ್ಲಿ ದಿನಾಂಕ :10-04-2026 ರಂದು ಎರಡನೆಯ ಸಮುದಾಯದತ್ತ ಶಾಲಾ ಕಾರ್ಯಕ್ರಮವನ್ನು ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ಎಸ್‌ಡಿಎಂಸಿ ಯ ಅಧ್ಯಕ್ಷರಾದ ಶ್ರೀಯುತ ನಾರಾಯಣಗುಡಿಗಾರ್ ಇವರು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು.

ಹಿರಿಯ ಸಹ ಶಿಕ್ಷಕಿ ಶ್ರೀಮತಿ ಸುನೀತಾ ನಾಯಕ್ ಇವರು ಎಲ್ಲರನ್ನೂ ಸ್ವಾಗತಿಸಿ ಸಮುದಾಯದತ್ತ ಶಾಲಾ ಕಾರ್ಯಕ್ರಮದ ಉದ್ದೇಶ ಹಾಗೂ ಇಲಾಖ ಮಾಹಿತಿಗಳೊಂದಿಗೆ ರಜಾ ಅವಧಿಯಲ್ಲಿ ಪೋಷಕರು ಮಕ್ಕಳ ಕುರಿತು ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ತಿಳಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಪ್ರಮೀಳಾ ಇವರು ಪ್ರಾಸ್ತಾವಿಕ ನುಡಿಗಳನ್ನು ಆಡುವುದರೊಂದಿಗೆ ಶಾಲೆಯ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಕೈಜೋಡಿಸಿದ SDMC, ಹಳೆ ವಿದ್ಯಾರ್ಥಿ ಸಂಘ, ದಾನಿಗಳು,ಪೋಷಕರು, ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಯವರಿಗೆ ಧನ್ಯವಾದಗಳನ್ನು ಸಮರ್ಪಿಸಿದರು. ರಜಾ ಅವಧಿಯಲ್ಲಿ ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆಯ ಕಡೆ ಹೆಚ್ಚಿನ ಗಮನ ನೀಡುವಂತೆ ಪೋಷಕರಿಗೆ ತಿಳಿಸಲಾಯಿತು. ನಂತರ ಮಕ್ಕಳ ಉತ್ತರ ಪತ್ರಿಕೆಗಳ ಪ್ರಗತಿ ಪರಿಶೀಲನೆಯ ಕುರಿತು ಸಮಾಲೋಚನೆ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಎಸ್ ಡಿ ಎಂ ಸಿ ಅಧ್ಯಕ್ಷರು ಇದುವರೆಗಿನ ಶಾಲೆಯ ಅಭಿವೃದ್ಧಿ ಕಾರ್ಯಗಳು ಹಾಗೂ ಇನ್ನು ಆಗಬೇಕಾದ ಕೆಲಸ ಕಾರ್ಯಗಳ ಬಗ್ಗೆ ತಿಳಿಸುತ್ತಾ, ಶಾಲೆಗೆ ಮಕ್ಕಳ ದಾಖಲಾತಿ ಮತ್ತು ಶಾಲೆಯ ಸಮಗ್ರ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ವಿನಂತಿಸಿದರು. ಶಾಲಾ ಶಿಕ್ಷಕಿ ಶ್ರೀಮತಿ ಸೌಮ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಾ ಶಿಕ್ಷಕಿ ಶ್ರೀಮತಿ ಅಶ್ವಿನಿ ಸಹಕರಿಸಿದರು..ಶಿಕ್ಷಕಿ ಕುಮಾರಿ ಸುಪ್ರೀತಾ ನೆರೆದಿದ್ದವರೆಲ್ಲರಿಗೂ ಧನ್ಯವಾದವನ್ನು ಸಮರ್ಪಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page