ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ, ಉತ್ತಮ ಸಾಧನೆ

ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರು. ಇಲ್ಲಿ ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ 100% ಫಲಿತಾಂಶ ದಾಖಲಿಸಿರುತ್ತಾರೆ.ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಕುಳಿತ ಒಟ್ಟು 78 ವಿದ್ಯಾರ್ಥಿಗಳಲ್ಲಿ 20 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು , ಶೇಕಡ 96.15% ಫಲಿತಾಂಶವನ್ನು ದಾಖಲಿಸಿರುತ್ತಾರೆ.
ಉತ್ತಮ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯವರು ಅಭಿನಂದನೆಯನ್ನು ಸಲ್ಲಿಸುತ್ತಿದ್ದಾರೆ.