
ಬೆಂಗಳೂರು: ಅಕ್ಟೋಬರ್ 1 ರಿಂದ ಸರ್ಕಾರಿ ನೌಕರರು ಹಾಗೂ ಕುಟುಂಬ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಲಾಗಿದೆ.
ಬಹಳ ವರ್ಷಗಳಿಂದ ಈ ಯೋಜನೆ ಮರುಜಾರಿಗೆ ಒತ್ತಾಯ ಕೇಳಿಬಂದಿದ್ದು ಇದೀಗ ಜಾರಿಗೆ ಬಂದಿದೆ. ಈ ಯೋಜನೆಯಡಿ ಸರ್ಕಾರಿ ಹಾಗೂ ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿಯೂ ನಗದು ರಹಿತ ವೈದ್ಯಕೀಯ ಉಚಿತ ಚಿಕಿತ್ಸೆ ಸಿಗಲಿದೆ.






















































