
ಬೆಂಗಳೂರು: ಸರ್ಕಾರಿ ವೈದ್ಯರು ತಮ್ಮ ಕರ್ತವ್ಯದ ನಂತರ ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದರೆ, ಅದರ ವಿವರಗಳನ್ನು ಸರ್ಕಾರಕ್ಕೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಆರೋಗ್ಯ ಇಲಾಖೆ ಆದೇಶಿಸಿದೆ.
ಖಾಸಗಿ ಆಸ್ಪತ್ರೆಗಳು ಕೂಡ ತಮ್ಮಲ್ಲಿ ಕೆಲಸ ಮಾಡುವ ಸರ್ಕಾರಿ ವೈದ್ಯರ ಮಾಹಿತಿಯನ್ನು ಜಿಲ್ಲಾ ಅಧಿಕಾರಿಗಳಿಗೆ ನೀಡಬೇಕು. ಸರ್ಕಾರಿ ವೈದ್ಯರಿಗೆ ಹೊರರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಲು ಅವಕಾಶವಿದ್ದು, ಒಳರೋಗಿಗಳಿಗೆ ಸೇವೆ ನೀಡುವುದನ್ನು ನಿಷೇಧಿಸಲಾಗಿದೆ.
ಈ ನಿಯಮ ಜಾರಿಯಾದ 60 ದಿನಗಳಲ್ಲಿ ವಿವರ ನೋಂದಾಯಿಸಿದವರಿಗೆ ಮಾತ್ರ ಖಾಸಗಿ ಸೇವೆ ಮುಂದುವರಿಸಲು ಅವಕಾಶ. ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.
ಇತ್ತೀಚೆಗೆ ಹೂವಿನಹಡಗಲಿ ತಾಲೂಕಿನಲ್ಲಿ ಮಾಹಿತಿ ಮುಚ್ಚಿಟ್ಟ ಪ್ರಕರಣದಲ್ಲಿ ವೈದ್ಯರಿಗೆ 50,000 ರೂ. ದಂಡ ವಿಧಿಸಲಾಗಿತ್ತು. ಇದನ್ನು ತಪ್ಪಿಸಲು ರಾಜ್ಯಾದ್ಯಂತ ಏಕರೂಪದ ನಿಯಮ ಜಾರಿಗೆ ತರಲಾಗಿದೆ.






















































