31.1 C
Udupi
Saturday, March 14, 2026
spot_img
spot_img
HomeBlogಸಾಣೂರು :ತಾಯಿಯ ಹೆಸರಲ್ಲಿ ಒಂದು ಗಿಡ ನೆಡುವ ಅಭಿಯಾನ

ಸಾಣೂರು :ತಾಯಿಯ ಹೆಸರಲ್ಲಿ ಒಂದು ಗಿಡ ನೆಡುವ ಅಭಿಯಾನ

ಭಾರತ ಸರಕಾರ ಯುವಕಾರ್ಯ ಕ್ರೀಡಾ ಸಚಿವಾಲಯ, ಮೈ ಭಾರತ್ ನೆಹರು ಯುವ ಕೇಂದ್ರ ಉಡುಪಿ, ಜಿಲ್ಲಾಡಳಿತ ಉಡುಪಿ, ಕುಂದಾಪುರ ಅರಣ್ಯ ವಿಭಾಗ ಕಾರ್ಕಳ ವಲಯ, ಸ್ವಚ್ಛ ಕಾರ್ಕಳ ಬ್ರಿಗೇಡ್, ರಾಜೇಶ್ವರಿ ಎಜುಕೇಶನ್ ಫೌಂಡೇಶನ್ (ರಿ.) ಸಾಣೂರು, ಇವರ ಸಹಯೋಗದಲ್ಲಿ ರಾಜ್ಯ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇದರ ನೇತೃತ್ವದಲ್ಲಿ “ಏಕ್ ಪೇಡ್ ಮಾ ಕೆ ನಾಮ್ ಅಭಿಯಾನ ” ( ತಾಯಿಯ ಹೆಸರಲ್ಲಿ ಒಂದು ಗಿಡ ನೆಡುವ ಅಭಿಯಾನ ) ನಡೆಯಿತುಸುಮಾರು 500 ಗಿಡಗಳನ್ನು ನೆಡುವ ಯೋಜನೆಯನ್ನು ಹಮ್ಮಿಕೊಂಡಿದ್ದು, 283 ಗಿಡಗಳನ್ನು ನೆಡಲಾಯಿತು

ವಿಧಾನಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಇವರು ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಕೇಂದ್ರ ಸರಕಾರದ ಹಲವಾರು ಕಾರ್ಯಕ್ರಮಗಳನ್ನು ಸಂಘ ಸಂಸ್ಥೆಗಳು ಯಶಸ್ವಿಯಾಗಿ ಅನುಷ್ಠಾನಗೊಳಿಸಿದರೆ, ಅಭಿವೃದ್ಧಿಗೆ ಸಹಕಾರಿಯಾಗಲಿದೆ ಮರಗಳನ್ನು ಪೋಷಿಸಿದರೆ ನಮಗೆ ಒಳ್ಳೆಯ ಗಾಳಿ, ನೀರಿಗೆ ತೊಂದರೆಯಾಗುದಿಲ್ಲ ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಯುವರಾಜ್ ಜೈನ್ ಅಧ್ಯಕ್ಷರು ಗ್ರಾಮ ಪಂಚಾಯತ್ ಸಾಣೂರು ಇವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮಂಜುನಾಥ್ ಗಾಣಿಗ ವಲಯ ಅರಣ್ಯಧಿಕಾರಿ ಕಾರ್ಕಳ -ಮೂಡಬಿದ್ರೆ ತಾಯಿಯ ಹೆಸರಲ್ಲಿ ನೆಡುವ ಒಂದು ಗಿಡವು ನಾವು ಪ್ರಕೃತಿ ಎಂಬ ತಾಯಿಗೆ ನೀಡುವ ಗೌರವ, ಎಂದು ಹೇಳುತ್ತಾ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು

ರಾಜೇಶ್ವರಿ ಎಜುಕೇಶನ್ ಫೌಂಡೇಶನ್ ಸಂಸ್ಥಾಪಕರಾದ ದೇವಿಪ್ರಸಾದ್ ಶೆಟ್ಟಿ, ಮಾತನಾಡಿ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಲು ಸಹಕರಿಸಿದ ಯುವಕ ಮಂಡಲ ಸಾಣೂರು ಮತ್ತು ಸ್ವಚ್ಛ ಬ್ರಿಗೇಡ್ ಕಾರ್ಕಳ ಇದರ ಅಧ್ಯಕ್ಷರು ಮತ್ತು ಸರ್ವ ಸದಸ್ಯರಿಗೆ ಕೃತಜ್ಞತೆ ತಿಳಿಸಿದರುಕಾರ್ಯಕ್ರಮದಲ್ಲಿ ಸ್ವಚ್ಛ ಕಾರ್ಕಳ ಬ್ರಿಗೇಡ್ ಇದರ 22 ಮಂದಿ ಪದಾಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು

ಸಾಣೂರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರುಗಳಾದ ಕರುಣಾಕರ್ ಕೋಟ್ಯಾನ್, ಸುಜಾತಾ ಶೆಟ್ಟಿ ಸದಸ್ಯರಾದ ರಮೇಶ್ ಪಾಲ್ಗೊಂಡಿದ್ದರುರಾಜೇಶ್ವರಿ ಎಜುಕೇಶನ್ ಫೌಂಡೇಶನ್ ಇದರ ಕಾರ್ಯದರ್ಶಿ ಶ್ವೇತಾ ದೇವಿಪ್ರಸಾದ್ ಶೆಟ್ಟಿ, ಯುವಕ ಮಂಡಲ ಸಾಣೂರು ಇದರ ಮಾಜಿ ಅಧ್ಯಕ್ಷರುಗಳಾದ ಪ್ರವೀಣ್ ಶೆಟ್ಟಿ, ಶಂಕರ್ ಶೆಟ್ಟಿ, ಜಗದೀಶ್ ಕುಮಾರ್, ಮಹೇಶ್ ಕುಮಾರ್, ಪ್ರಸಾದ್ ಪೂಜಾರಿ, ಉಪಾಧ್ಯಕ್ಷರಾದ ಹರೀಶ್ ರಾವ್, ಜೊತೆ ಕಾರ್ಯದರ್ಶಿ ಪ್ರಮಿತ್ ಸುವರ್ಣ, ಪ್ರಶಾಂತ್ ಆಚಾರ್ಯ, ಪದಾಧಿಕಾರಿಗಳಾದ ರಾಜೇಶ್ ಪೂಜಾರಿ, ವಿಘ್ನೇಶ್ ರಾವ್, ರಮೇಶ್ ಪೂಜಾರಿ, ಪ್ರಭಾಕರ್ ಶೆಟ್ಟಿ, ಮುರಳೀಧರ ಸುವರ್ಣ, ವಿದ್ಯಾನಂದ, ಪ್ರಶಾಂತ್ ಶೆಟ್ಟಿ, ಜಯನ್ ಶೆಟ್ಟಿ, ಸುದರ್ಶನ್ ನಾಯ್ಕ್, ಪ್ರಸನ್ನ ಆಚಾರ್ಯ, ಪ್ರವೀಣ್ ಶೆಟ್ಟಿ, ಸುವಿತ್, ಜಯ ಶೆಟ್ಟಿಗಾರ್, ಶ್ರೀನಿವಾಸ್ ಆಚಾರ್ಯ, ವಿಕಾಸ್ , ಪುಟಾಣಿಗಳಾದ ಧನ್ಯಶ್ರೀ, ಅಲೋಪ್, ಆರ್ಯನ್, ರಚಿತ್ ಈ ಅಭಿಯಾನದಲ್ಲಿ ಭಾಗವಹಿಸಿದರುಮಂಡಲದ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಪ್ರಕಾಶ್ ರಾವ್ ಧನ್ಯವಾದಗೈದರು. ಮೋಹನ್ ಶೆಟ್ಟಿ ಸಾಣೂರು ಕಾರ್ಯಕ್ರಮವನ್ನು ನಿರ್ವಹಿಸಿದರು

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page