30 C
Udupi
Saturday, June 13, 2026
spot_img
spot_img
HomeBlog''ಸಿಎಂ ಕನಸು ಮೂರು ಬಾರಿ ಕೈತಪ್ಪಿತು': ಭಾವುಕರಾದ ಪರಮೇಶ್ವರ್

”ಸಿಎಂ ಕನಸು ಮೂರು ಬಾರಿ ಕೈತಪ್ಪಿತು’: ಭಾವುಕರಾದ ಪರಮೇಶ್ವರ್

ತುಮಕೂರು: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಮುಖ್ಯಮಂತ್ರಿ ಆಗುವ ತಮ್ಮ ಕನಸು ಮೂರು ಬಾರಿ ಕೈತಪ್ಪಿದ ಬಗ್ಗೆ ಭಾವುಕರಾಗಿ ಮನದಾಳದ ನೋವನ್ನು ಹಂಚಿಕೊಂಡರು.

2013ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸೋತ ಕಾರಣ ಮುಖ್ಯಮಂತ್ರಿ ಹುದ್ದೆಯ ಅವಕಾಶ ತಪ್ಪಿಹೋಯಿತು. ಅಂದು ಗೆದ್ದಿದ್ದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದು ಅವರು ಹೇಳಿದರು.

2018ರಲ್ಲಿ ಕಾಂಗ್ರೆಸ್ 80 ಸ್ಥಾನಗಳನ್ನು ಗೆದ್ದಿದ್ದರೂ ಮೈತ್ರಿ ಸರ್ಕಾರ ರಚನೆಯಾಗಿ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಆ ಸಂದರ್ಭದಲ್ಲೂ ತಮಗೆ ಅವಕಾಶ ಸಿಗಬಹುದಿತ್ತು, ಆದರೆ ಅದು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

2026ರ ರಾಜಕೀಯ ಬೆಳವಣಿಗೆಗಳಲ್ಲಿಯೂ ಸಿಎಂ ಹುದ್ದೆಯ ನಿರೀಕ್ಷೆ ಇತ್ತು. ಆದರೆ ವಿವಿಧ ಕಾರಣಗಳಿಂದ ಅದು ಕೈಗೂಡಲಿಲ್ಲ. ಹೈಕಮಾಂಡ್ ಜೊತೆಗಿನ ಮಾತುಕತೆಯಲ್ಲಿ ಪಕ್ಷದ ಹಿತವೇ ಮುಖ್ಯ ಎಂದು ತಿಳಿಸಿದ್ದೆ ಎಂದು ಹೇಳಿದರು.

ಸದ್ಯ ಉಪಮುಖ್ಯಮಂತ್ರಿಯಾಗಿ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದಾಗಿ ಹೇಳಿದ ಅವರು, ಜನರ ವಿಶ್ವಾಸ ಉಳಿಸಿಕೊಂಡು ಸರ್ಕಾರದ ಕಾರ್ಯಕ್ಷಮತೆಯನ್ನು ಮತ್ತಷ್ಟು ಬಲಪಡಿಸಲು ಶ್ರಮಿಸುವುದಾಗಿ ಭರವಸೆ ನೀಡಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page