
ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆಗೆ ಹಾಜರಾದ ವಿಚಾರವಾಗಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಸಿಎಂ ಯಾವುದೇ ತಪ್ಪು ಮಾಡಿಲ್ಲ. ಕಾನೂನಿಗೆ ಗೌರವ ಕೊಟ್ಟು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಹೇಳಿದ್ದಾರೆ.
ಸಿಎಂ ಚುನಾವಣಾ ಪ್ರಚಾರದಲ್ಲಿ ಇದ್ದರೂ ಕೂಡ, ಕಾನೂನಿಗೆ ಗೌರವ ನೀಡಿದ್ದಾರೆ ಅವರು ಒಂದು ವಾರ ವಿನಾಯಿತಿ ಕೇಳಬಹುದಿತ್ತು . ಆದರೆ, ಅಧಿಕಾರದ ದುರುಪಯೋಗ ಆಗಬಾರದು ಎಂಬ ಕಾರಣಕ್ಕಾಗಿ ವಿಚಾರಣೆಗೆ ಹಾಜರಾಗಿದ್ದಾರೆ. ಅವರು ಯಾವುದೇ ತಪ್ಪು ಮಾಡಿಲ್ಲ. ಲೋಕಾಯುಕ್ತ ಏನು ಕೇಳುತ್ತಾರೋ ಅದಕ್ಕೆ ಉತ್ತರ ಕೊಡುತ್ತೇವೆ ಎಂದು ಡಿಕೆಶಿ ತಿಳಿಸಿದ್ದಾರೆ.






















































