
ಕಾರ್ಕಳ: ಮೇ 2 ರಂದು ಕಾರ್ಕಳದ ಸಂಪತ್ ಸಾಲಿಯನ್ ಎಂಬಾತ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ “ಸಿಎಂ ಸಿದ್ದರಾಮಯ್ಯನನ್ನು ಕೊಂದರೆ ಹಿಂದುಗಳಿಗೆ ನೆಮ್ಮದಿ” ಎಂದು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದು ಈ ಹಿನ್ನೆಲೆಯಲ್ಲಿ ಕಾರ್ಕಳ ನಗರ ಠಾಣೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಕಾರ್ಕಳ ಯೂತ್ ಕಾಂಗ್ರೆಸ್ ಅಧ್ಯಕ್ಷ ಸೂರಜ್ ಶೆಟ್ಟಿ ನಕ್ರೆ ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಈ ಹಿನ್ನೆಲೆಯಲ್ಲಿ ಸಂಪತ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ ಎಎಸ್ಪಿ ಡಾ. ಹರ್ಷ ಪ್ರಿಯಂವದ, ವೃತ ನಿರೀಕ್ಷಕ ಮಂಜಪ್ಪ ಡಿ.ಆರ್ ಮಾರ್ಗದರ್ಶನದಲ್ಲಿ ಕಾರ್ಕಳ ನಗರ ಠಾಣೆ ಎಸ್ಐ ಸಂದೀಪ್ ಶೆಟ್ಟಿ ಹಾಗೂ ಶಿವಕುಮಾರ್ ಅವರ ನೇತೃತ್ವದಲ್ಲಿ ಸಂಪತ್ನನ್ನು ವಶಕ್ಕೆ ಪಡೆದಿದ್ದಾರೆ.