ಶ್ರೀ ಭುವನೇಂದ್ರ ರೆಸಿಡೆನ್ಶಿಯಲ್ ಸ್ಕೂಲ್, ವಿದ್ಯಾರ್ಥಿಗಳ ಸಾಧನೆ

ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಇಂಗ್ಲೀಷ್ ಮೀಡಿಯಂ ರೆಸಿಡೆನ್ಶಿಯಲ್ ಸ್ಕೂಲ್ ದಾವಣಗೆರೆ ಇಲ್ಲಿ ನಡೆದ ಸಿಬಿಎಸ್‌ಇ ಕ್ಲಸ್ಟರ್-VIII ಮಟ್ಟದ 2025-26ನೇ ಸಾಲಿನ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಶ್ರೀ ಭುವನೇಂದ್ರ ರೆಸಿಡೆನ್ಶಿಯಲ್ ಸ್ಕೂಲ್ ಕಾರ್ಕಳ ಇಲ್ಲಿನ ಹತ್ತನೆಯ ತರಗತಿಯ ವಿದ್ಯಾರ್ಥಿ ಮಾಸ್ಟರ್ ಭುವನ್ ಮಾಲಾಜಿ 19ರ ವಯೋಮಿತಿಯ ಒಳಗಿನ 1500 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಹಾಗೂ ಏಳನೆಯ ತರಗತಿ ವಿದ್ಯಾರ್ಥಿನಿ ಕುಮಾರಿ ಸ್ಪೂರ್ತಿ ಆರ್ 19ರ ವಯೋಮಿತಿಯ ಒಳಗಿನ 1500 ಮೀಟರ್ ಹಾಗೂ 3000 ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು, ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.

ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ನಿಶಾಂತ್ ಅಂಚನ್ ಹಾಗೂ ಕೋಚ್ ದಿನೇಶ್ ಇವರು ಮಾರ್ಗದರ್ಶನ ನೀಡಿರುತ್ತಾರೆ. ಇವರ ಸಾಧನೆಗೆ ಸಂಸ್ಥೆಯ ಪ್ರಾಂಶುಪಾಲರು, ಸಂಚಾಲಕರು, ಆಡಳಿತ ಮಂಡಳಿಯ ಸದಸ್ಯರು, ಪೂರ್ವ ವಿದ್ಯಾರ್ಥಿ ಸಂಘ, ವಿದ್ಯಾರ್ಥಿಗಳು, ಪೋಷಕರು ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಶುಭ ಹಾರೈಸಿರುತ್ತಾರೆ.
