26.3 C
Udupi
Friday, May 1, 2026
spot_img
spot_img
HomeBlogಸಿರಿಯಾದ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ..!

ಸಿರಿಯಾದ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ..!

ವಾಷಿಂಗ್ಟನ್‌: ಸಿರಿಯಾ ಸರ್ವಾಧಿಕಾರಿ ಬಶರ್ ಅಲ್ ಅಸ್ಸಾದ್ ಅವರ ಆಡಳಿತ ಕೊನೆಗೊಂಡ ಬೆನ್ನಲ್ಲೇ ಅಮೇರಿಕಾವು ಸಿರಿಯಾದ ಮೇಲೆ ವೈಮಾನಿಕ ದಾಳಿ ನಡೆಸಿದೆ.

ಸರ್ವಾಧಿಕಾರಿ ಅಸ್ಸಾದ್‌ ದೇಶ ತೊರೆದ ನಂತರ ಹಯಾತ್ ತಹ್ರೀರ್ ಅಲ್-ಶಾಮ್ ನೇತೃತ್ವದ ಉಗ್ರರು ಸಿರಿಯಾವನ್ನು ವಶಪಡಿಸಿಕೊಂಡಿದ್ದು ಈ ಸಂಘಟನೆ ವಶಪಡಿಸಿಕೊಂಡರೂ ಅಲ್ಲಿ ಐಸಿಸ್‌ ಉಗ್ರರು ಇನ್ನೂ ಇದ್ದಾರೆ. ಮುಂದಿನ ದಿನಗಳಲ್ಲಿ ಐಸಿಸ್‌ ಉಗ್ರರು ಚಿಗುರಿ ಮತ್ತೆ ಹೋರಾಟಕ್ಕೆ ಇಳಿಯಬಾರದು ಎಂಬ ಕಾರಣಕ್ಕೆ ಅಮೆರಿಕ ಏರ್‌ಸ್ಟ್ರೈಕ್‌ ನಡೆಸಿದ್ದು ಮಧ್ಯ ಸಿರಿಯಾದಲ್ಲಿರುವ 75ಕ್ಕೂ ಹೆಚ್ಚು ನೆಲೆಗಳ ಮೇಲೆ ಬಾಂಬ್‌ ದಾಳಿ ನಡೆಸಿದೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್‌ ದಾಳಿಯ ಬಗ್ಗೆ ಪ್ರತಿಕ್ರಿಯಿಸಿ, ಸಿರಿಯಾದಲ್ಲಿ ಸೃಷ್ಟಿಯಾಗಿರುವ ನಿರ್ವಾತದ ಲಾಭವನ್ನು ಪಡೆಯಲು ಐಸಿಸ್‌ ಪ್ರಯತ್ನಿಸುತ್ತಿದೆ. ಐಸಿಸ್‌ ಮೇಲೆ ಅಮೆರಿಕ ಕಣ್ಣಿಟ್ಟು ಅವರ ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿಸಿದರು.

ಇತ್ತ ಇಸ್ರೇಲ್‌ ಕೂಡ ಸಿರಿಯಾದ ಸೇನೆಯ ಕೇಂದ್ರ ಕಚೇರಿ, ಗುಪ್ತಚರ ಸಂಸ್ಥೆ ಮತ್ತು ಕಸ್ಟಮ್ಸ್‌ನ ಕಚೇರಿಗಳನ್ನು ಒಳಗೊಂಡ ಕಟ್ಟಡದ ಮೇಲೆ ದಾಳಿ ನಡೆಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page