ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ.
ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇದರ 2025-26ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನಾ ಸಮಾರಂಭವು ದಿನಾಂಕ 14-06-2025ನೇ ಶನಿವಾರ ನಡೆಯಿತು.
ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿದ ಉಡುಪಿ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರು ಹಾಗೂ ಕಾರ್ಕಳ ತಾಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಆದಂತಹ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಶಿಕ್ಷಣ ಕೇವಲ ಉದ್ಯೋಗ ಗಳಿಸುವ ಮಾರ್ಗವಾಗದೆ ಜೀವನ ಪಾಠ ಪಡೆಯುವಂತ ಶಿಕ್ಷಣವಾಗಬೇಕು, ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದ ವೃತ್ತಿ, ವಿದ್ಯಾರ್ಥಿಗಳು ಪರಿಶ್ರಮ ಪಟ್ಟರೆ ಅತ್ಯುತ್ತಮವಾದ ಅಂಕಗಳನ್ನು ಗಳಿಸಿ ಜೀವನದಲ್ಲಿ ಯಶಸ್ಸನ್ನು ಸಾಧಿಸಬಹುದು, ಸಮಾಜದಲ್ಲಿ ಸದಾ ಜಾಗೃತರಾಗಿ ಬದುಕಬೇಕು ಎಂದು ಮಕ್ಕಳಿಗೆ ತಿಳಿಹೇಳಿ ಡಿವಿಜಿಯವರ ಮಂಕುತಿಮ್ಮನ ಕಗ್ಗದ ಸಂದೇಶವನ್ನು ತಿಳಿಸಿದರು. ಇದೇ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿ ಸರಕಾರದ ಮಂತ್ರಿಮಂಡಲದ ಸದಸ್ಯರು ಪ್ರಮಾಣ ವಚನವನ್ನು ಸ್ವೀಕರಿಸಿದರು. ಶಾಲಾ ವಿದ್ಯಾರ್ಥಿ ನಾಯಕ ತನ್ನ ವಿಶ್ವಾಸದಾಯಕ ಮಾತುಗಳನ್ನಾಡಿ ಕರ್ತವ್ಯ ನಿಷ್ಠೆಯನ್ನು ವ್ಯಕ್ತಪಡಿಸಿದನು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶ್ರೀಯುತ ಆನಂದ್ರಾಯ ನಾಯಕ್ ಇವರು ವಹಿಸಿ ಮಂತ್ರಿಮಂಡಲದ ಸದಸ್ಯರಿಗೆ ಜವಾಬ್ದಾರಿಯ ಪಾಠವನ್ನು ತಿಳಿಸಿದರು. ಈ ಸಮಾರಂಭದ ವೇದಿಕೆಯಲ್ಲಿ ಶಾಲಾ ದಾನಿಗಳು ಹಾಗೂ ಎಸ್.ಡಿ.ಎಮ್.ಸಿ. ಸದಸ್ಯರಾದ ಶ್ರೀಯುತ ರಘುರಾಮ್ ಕಾಮತ್ ಸ್ಥಳೀಯ ಪುರಸಭಾ ಸದಸ್ಯರಾದ ಶ್ರೀಯುತ ಪ್ರದೀಪ್ ರಾಣೆ, ಎಸ್.ಡಿ.ಎಂ.ಸಿ. ಉಪಾಧ್ಯಕ್ಷರಾದ ಶ್ರೀಮತಿ ವೀಣಾ ರಾಜೇಶ್ ಭಂಡಾರಿ ಮತ್ತು ಇತರ ಸದಸ್ಯರು ಹಾಜರಿದ್ದರು. ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಶ್ರೀಯುತ ದಿವಾಕರ್ ನೆರೆದಿರುವ ಸರ್ವರನ್ನು ಸ್ವಾಗತಿಸಿದರು. ಸಮಾಜ ವಿಜ್ಞಾನ ಶಿಕ್ಷಕಿಯಾದ ಶ್ರೀಮತಿ ಪ್ರತಿಮಾ ನಾಯಕ್ ಕಾರ್ಯಕ್ರಮವನ್ನು ನಿರೂಪಿಸಿ, ಗಣಿತ ಶಿಕ್ಷಕರಾದ ಹರಿಶ್ಚಂದ್ರ ಬಾಯರಿ ಧನ್ಯವಾದ ಸಮರ್ಪಿಸಿದರು.



















