
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ಬಜ್ಪೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿಯ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಆರ್ ಎಸ್ ಎಸ್ ಮುಖಂಡ ಡಾ. ಪ್ರಭಾಕರ್ ಭಟ್ ಅವರು ಪ್ರಚೋದನಾತ್ಮಕ ಭಾಷಣ ಮಾಡಿದ್ದಾರೆ ಎಂಬ ಆರೋಪದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಸಮಾಜದ ಸ್ವಾಸ್ಥ್ಯ ಕೆಡುವಂತೆ, ಮತೀಯ ಗುಂಪುಗಳ ನಡುವೆ ವೈಮನಸ್ಸು ಉಂಟು ಮಾಡುವಂತೆ ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ನೀಡಿದ್ದು ಇದರಿಂದ ಜಿಲ್ಲೆಯಲ್ಲಿ ಕಾನೂನು ವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.





















































