ವಿಜೇತ ವಿಶೇಷ ಶಾಲಾ ಮಕ್ಕಳ ಸಾಧನೆ

ಹರಿಯಾಣದ ಮಹರ್ಷಿ ದಯಾನಂದ ವಿಶ್ವವಿದ್ಯಾನಿಲಯದಲ್ಲಿ ನಡೆದ ಸ್ಪೆಷಲ್ ಒಲಿಂಪಿಕ್ಸ್ ಭಾರತ್ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿಜೇತ ವಿಶೇಷ ಶಾಲಾ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಿ ಸನ್ನಿಧಿ 100 ಮೀ ಓಟದಲ್ಲಿ ದ್ವಿತೀಯ ಸ್ಥಾನ ಬೆಳ್ಳಿ ಪದಕ ಹಾಗೂ ನಿಶಿತಾ 100 ಮೀ ಓಟದಲ್ಲಿ ತೃತೀಯ ಸ್ಥಾನ ಕಂಚಿನ ಪದಕ ಗಳಿಸಿ ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.




















