30.8 C
Udupi
Monday, February 23, 2026
spot_img
spot_img
HomeBlogಸ್ವಚ್ಛತೆಯನ್ನು ಕಾಪಾಡುವುದು ವಿದ್ಯಾರ್ಥಿಗಳ ಆದ್ಯ ಕರ್ತವ್ಯವಾಗಬೇಕು: ರಮೇಶ್ ವೈದ್ಯ

ಸ್ವಚ್ಛತೆಯನ್ನು ಕಾಪಾಡುವುದು ವಿದ್ಯಾರ್ಥಿಗಳ ಆದ್ಯ ಕರ್ತವ್ಯವಾಗಬೇಕು: ರಮೇಶ್ ವೈದ್ಯ

       ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿದ್ದರೆ ಆರೋಗ್ಯ ಚೆನ್ನಾಗಿರುತ್ತದೆ. ನಮ್ಮ ವೈಯಕ್ತಿಕ ಸ್ವಚ್ಛತೆ ಜೊತೆಗೆ ನಾವು ವಾಸಿಸುವ ಪರಿಸರವನ್ನು ಸ್ವಚ್ಛವಾಗಿಸಬೇಕು. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಪಡೆಯುವುದು ಎಷ್ಟು ಮುಖ್ಯವೋ ಅಂತೆಯೇ ಸ್ವಚ್ಛತೆಯನ್ನು ಕಾಪಾಡುವುದು ಕೂಡ ಅಷ್ಟೇ ಮುಖ್ಯವಾಗಿದೆ.  ಅದು ವಿದ್ಯಾರ್ಥಿಗಳ ಆದ್ಯ ಕರ್ತವ್ಯವಾಗಬೇಕು ಎಂದು ಕರ್ನಾಟಕ ಬ್ಯಾಂಕ್ ಲಿಮಿಟೆಡ್ ನ  ಪ್ರಾದೇಶಿಕ ಕಚೇರಿ ಉಡುಪಿಯ ಮಹಾಪ್ರಬಂಧಕ  ರಮೇಶ್ ವೈದ್ಯ ಹೇಳಿದರು. 



ಅವರು ಎಸ್.ವಿ.ಟಿ ಶಿಕ್ಷಣ ಸಂಸ್ಥೆಗಳು ಕಾರ್ಕಳದ ವತಿಯಿಂದ, ಅಂಡಾರು ವಿಠಲ ರುಕ್ಮಿಣಿ ಕಿಣಿ ಸಂಸ್ಕೃತಿಕ ಸಭಾಭವನದಲ್ಲಿ ಆಯೋಜಿಸಿದ ಕರ್ನಾಟಕ ಬ್ಯಾಂಕ್ ನ ಪ್ರಾಯೋಜಕತ್ವದಲ್ಲಿ ಪದವಿಪೂರ್ವ ವಿಭಾಗಕ್ಕೆ ಸಿ ಎಸ್ ಆರ್ .ಫಂಡಿನ ನೆರವಿನಿಂದ ನೂತನವಾಗಿ ನಿರ್ಮಿಸಿದ ಶೌಚಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.




ಎಸ್ ವಿ ಟಿ ಆಂಗ್ಲ ಮಾಧ್ಯಮದ ಪುಟ್ಟ ಮಕ್ಕಳ ಸದುಪಯೋಗಕ್ಕಾಗಿ ಕಾರ್ಕಳ ಮೀರಾ ಕಾಮತ್ ಅವರ ಸ್ಮರಣಾರ್ಥವಾಗಿ ನಿರ್ಮಿಸಿದ ಉದ್ಯಾನವನವನ್ನು ಕಾರ್ಕಳ ಕಮಲಾಕ್ಷ ಕಾಮತ್ ಉದ್ಘಾಟಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಬ್ಯಾಂಕ್ ಕಾರ್ಕಳ ಶಾಖೆಯ ಪ್ರಬಂಧಕ ಮೂರ್ತಿ ಸಿ ಕೆ, ಎಸ್ ವಿ ಎಜುಕೇಶನ್ ಟ್ರಸ್ಟಿನ ಅಧ್ಯಕ್ಷ ವೈ ನರಸಿಂಹ ಶೆಣೈ , ಕಾರ್ಯದರ್ಶಿ ಕೆ ಪಿ ಶೆಣೈ , ಕೋಶಾಧಿಕಾರಿ ಐ ರವೀಂದ್ರನಾಥ್ ಪೈ , ಶ್ರೀ ವೆಂಕಟರಮಣ ದೇವಾಳದ ಮುಕ್ತಸರರಾದ ಶಿವಾನಂದ ಕಾಮತ್ , ರಾಜಗೋಪಾಲ ಶೆಣೈ, ಎಸ್ ವಿ ಟಿ ಸಮೂಹ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶ್ರೀ ವೆಂಕಟರಮಣ ದೇವಾಲಯದ ಒಂದನೇ ಆಡಳಿತ ಮೊಕ್ತೇಸರರಾದ ಕೆ ಜಯರಾಮ ಪ್ರಭು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ನೇಮಿರಾಜ ಶೆಟ್ಟಿ ಕೆ ಸ್ವಾಗತಿಸಿದರು . ಪ್ರೌಢಶಾಲೆ ಭಾಗದ ಹಿರಿಯ ಸಹ ಶಿಕ್ಷಕರಾದ ಯೋಗೇಂದ್ರ ನಾಯಕ್ ವಂದಿಸಿದರು. ಸಮಾಜಶಾಸ್ತ್ರ ಉಪನ್ಯಾಸಕ ಪ್ರಭತ್ ರಂಜನ್ ನಿರೂಪಿಸಿದರು.

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page