10ನೇ ತರಗತಿ ಪ್ರಥಮ ಭಾಷೆ ಶಿಕ್ಷಕರ ಕಾರ್ಯಗಾರ

ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ವಲಯ ಇದರ ವತಿಯಿಂದ ಸ್ವಸ್ತಿಶ್ರೀ ನೇಮಿಸಾಗರ ವರ್ಣೀಜಿ ಪ್ರೌಢಶಾಲೆ ಹಿರಿಯಂಗಡಿ ಕಾರ್ಕಳ ಇಲ್ಲಿ ಕಾರ್ಕಳ ಹಾಗೂ ಹೆಬ್ರಿ ತಾಲೂಕು ಪ್ರೌಢಶಾಲಾ 10ನೇ ತರಗತಿ ಪ್ರಥಮ ಭಾಷೆ ವಿಷಯ ಶಿಕ್ಷಕರ ಕಾರ್ಯಾಗಾರ ಹಾಗೂ ಮಾದರಿ ಪ್ರಶ್ನೆ ಪತ್ರಿಕೆ ತಯಾರಿ, ಕ್ಲಿಷ್ಟ ವಿಷಯಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಒಂದು ದಿನದ ಕಾರ್ಯಾಗಾರ ಇಂದು ಜರುಗಿತು.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಭಾಸ್ಕರ್ ಇವರು ದೀಪ ಪ್ರಜ್ವಲಿಸಿ ಕಾರ್ಯಗಾರದ ಸದುಪಯೋಗ ಪಡೆದುಕೊಂಡು ಶಾಲೆಗಳಲ್ಲಿ ಅನುಷ್ಠಾನಗೊಳಿಸುವಂತೆ ತಿಳಿಸಿದರು. ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಉಷಾ ಪಡಿವಾಳ್ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಾಗಾರಕ್ಕೆ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಶಿಕ್ಷಕರಾದ ಪ್ರಭಾಕರ್ ಕೊಂಡಳ್ಳಿ, ಗಣೇಶ್ ಜಾಲ್ಸೂರ್, ಶಿವಸುಬ್ರಹ್ಮಣ್ಯ ಭಟ್, ಡೊಮಿನಿಕ್ ಅಂದಾದ್ರೆ ಇವರು ಮಾರ್ಗದರ್ಶನ ನೀಡಿದರು. ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಪ್ರಥಮ ಭಾಷಾ ಶಿಕ್ಷಕರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು



















