25.7 C
Udupi
Monday, August 3, 2026
spot_img
spot_img
HomeBlogಸ್ವಸ್ತಿ ಶ್ರೀ ನೇಮಿಸಾಗರ ವರ್ಣೀಜಿ ಪ್ರೌಢಶಾಲೆಯಲ್ಲಿ, ಇಂಟರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ

ಸ್ವಸ್ತಿ ಶ್ರೀ ನೇಮಿಸಾಗರ ವರ್ಣೀಜಿ ಪ್ರೌಢಶಾಲೆಯಲ್ಲಿ, ಇಂಟರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ

ಹಿರಿಯಂಗಡಿ, ಕಾರ್ಕಳ: ಎಸ್ .ಎನ್ .ವಿ. ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ಇಂಟರ್ ಆಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭವು ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭವಾಗಿ, ವಿದ್ಯಾರ್ಥಿಗಳಲ್ಲಿ ನಾಯಕತ್ವ, ಸೇವಾ ಮನೋಭಾವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶವನ್ನು ತಿಳಿಸಲಾಯಿತು.

ಇಂಟರ್ ಆಕ್ಟ್ ಕ್ಲಬ್‌ನ ಸಂಯೋಜಕ ಶಿಕ್ಷಕಿ ಶ್ರೀಮತಿ ಸುಮತಿ ಅವರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು, ಮುಖ್ಯೋಪಾಧ್ಯಾಯನಿ ಶ್ರೀಮತಿ ಉಷಾ ಪಡಿವಾಳ್ ಹೆಚ್ ಇವರು ಇಂಟರ್ ಆಕ್ಟ್ ಕ್ಲಬ್‌ನ ಉದ್ದೇಶ ಹಾಗೂ ಸಮಾಜ ಸೇವೆಯಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ವಿವರಿಸಿದರು.

ಈ ಸಂದರ್ಭದಲ್ಲಿ 2026–27ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಲಾಯಿತು. ರೋಟರಿ ಕ್ಲಬ್ ನ ಅಧ್ಯಕ್ಷರಾದ ವಿಜೇಂದ್ರ ಕುಮಾರ್ ಮತ್ತು ಇಂಟರ್ ಆಕ್ಟ್ ಕ್ಲಬ್ ನ ಚೇರ್ಮನ್ ಶೇಖರ್ ಹೆಚ್ ರವರು ಇಂಟರ್ ಆಕ್ಟ್ ಕ್ಲಬ್‌ನ ಎಲ್ಲಾ ಚಟುವಟಿಕೆಗಳು ಸಂಯೋಜಕ ಶಿಕ್ಷಕರ ಮಾರ್ಗದರ್ಶನದಂತೆ ವರ್ಷಪೂರ್ತಿ ಪರಿಸರ ಸಂರಕ್ಷಣೆ, ಗಿಡ ನೆಡುವುದು, ಸ್ವಚ್ಛತಾ ಅಭಿಯಾನ, ಆರೋಗ್ಯ ಜಾಗೃತಿ, ಸಮಾಜಸೇವೆ, ದಾನ ಕಾರ್ಯಗಳು ಹಾಗೂ ವಿವಿಧ ಸೇವಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಲ್ಲಿ ನಮ್ಮ ಸಹಕಾರ ಇದ್ದೇ ಇರುತ್ತದೆ ಎಂದು ತಿಳಿಸಿದರು. ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ವಿದ್ಯಾರ್ಥಿನಿ ಸಾನ್ವಿ ಹಾಗೂ ವಿದ್ಯಾರ್ಥಿ ಮೋಕ್ಷಿತ್ ಜೈನ್ ಇವರು ಸೇವೆ, ಶಿಸ್ತು ಹಾಗೂ ತಂಡದ ಸಹಕಾರದೊಂದಿಗೆ ಕ್ಲಬ್‌ನ ಚಟುವಟಿಕೆಗಳನ್ನು ಯಶಸ್ವಿಯಾಗಿ ಮುನ್ನಡೆಸುವ ಸಂಕಲ್ಪ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ಸದಸ್ಯರು ,ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಕೊನೆಯಲ್ಲಿ ವಂದನಾರ್ಪಣೆ ಸಲ್ಲಿಸಿ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಲಾಯಿತು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page