21.1 C
Udupi
Tuesday, February 17, 2026
spot_img
spot_img
HomeBlogಸ್ವಸ್ಥ ಸಮಾಜದ ನಿರ್ಮಾಣವಾಗಬೇಕಾದರೆ ವಿದ್ಯಾರ್ಥಿಗಳು ದುಶ್ಚಟ ಮುಕ್ತ ಜೀವನ ನಡೆಸಬೇಕು

ಸ್ವಸ್ಥ ಸಮಾಜದ ನಿರ್ಮಾಣವಾಗಬೇಕಾದರೆ ವಿದ್ಯಾರ್ಥಿಗಳು ದುಶ್ಚಟ ಮುಕ್ತ ಜೀವನ ನಡೆಸಬೇಕು

spot_imgspot_img

ಶಾಲಾ ಮಕ್ಕಳಿಗೆ ದುಶ್ಚಟಗಳ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

       ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಾರ್ಕಳ ತಾಲೂಕು ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಸಂಯುಕ್ತ ಪ್ರೌಢಶಾಲೆ ಪೆರ್ವಾಜೆ ಶಾಲೆಯ ಸಹಯೋಗದೊಂದಿಗೆ ನಡೆದ ಶಾಲಾ ಮಕ್ಕಳಿಗೆ ದುಶ್ಚಟಗಳ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟನೆಯನ್ನು ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿಯಾದ ಶ್ರೀ ಗಣೇಶ್‌ ರವರು ನೆರವೇರಿಸಿದರು. 
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅನಂತಶಯನ ಒಕ್ಕೂಟದ ಅಧ್ಯಕ್ಷರಾದ ಸುಧಾಕರ್‌ ರವರು ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ವಸ್ಥ ಸಮಾಜ ನಿರ್ಮಾಣವಾಗಬೇಕಾದರೆ ಯುವಜನತೆಯ ಪಾತ್ರ ಬಹಳ ಅಗತ್ಯ. ಹದಿಹರೆಯದ ವಯಸ್ಸಿನಲ್ಲಿ ದಾರಿ ತಪ್ಪುವ ವಿದ್ಯಾರ್ಥಿಗಳು ಈ ಬಗ್ಗೆ ಜಾಗೃತರಾಗಿರಬೇಕು. ಸಪ್ತ ವ್ಯಸನಗಳ ಬಗ್ಗೆ ಪಂಚಮಹಾ ಕಾಯಿಲೆಯ ಬಗ್ಗೆ, ನಾಟಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವನ್ನು ಮೂಡಿಸುವ ತರಭೇತಿ ಕಾರ್ಯಗಾರವನ್ನು ನಡೆಸಿಕೊಟ್ಟರು.
    ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಸಾವಿತ್ರಿ ಮನೋಹರ್ ರವರು ಸಂಸ್ಕಾರ ಸಂಸ್ಕೃತಿಯ ಬಗ್ಗೆ ತಿಳಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಸ್ವಾಸ್ಥ ಸಂಕಲ್ಪದ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು
     ಕಾರ್ಯಕ್ರಮದಲ್ಲಿ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರಾದ ಶೀಮತಿ ವೇದಾವತಿ, ಶಿಕ್ಷಕ ವೃಂದ, ಜನಜಾಗೃತಿ ವೇದಿಕೆಯ ಸದಸ್ಯರಾದ ಶ್ರೀಮತಿ ಶೋಭಾ ಭಾಸ್ಕರ್‌, ವಲಯದ ಮೇಲ್ವಿಚಾರಕರಾದ ಶ್ರೀಮತಿ ಗೀತಾ‌ ಹೆಗ್ಡೆ, ಸೇವಾಪ್ರತಿನಿಧಿ ಸುಜಾತ ಶೆಟ್ಟಿಗಾರ್‌ ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು.
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page