32.3 C
Udupi
Tuesday, April 21, 2026
spot_img
spot_img
HomeBlogಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ ಪ್ರಧಾನಿ ಮೋದಿ

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ ಪ್ರಧಾನಿ ಮೋದಿ

ಇನ್ನೇನು ಸ್ವಾತಂತ್ರ್ಯ ದಿನಾಚರಣೆಗೆ ಕೆಲವೇ ದಿನಗಳು ಬಾಕಿ ಉಳಿದಿತ್ತು ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಹರ್ ಘರ್ ತಿರಂಗ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ದೇಶವಾಸಿಗಳಿಗೆ ಕರೆ ನೀಡಿದ್ದಷ್ಟೇ ಅಲ್ಲದೆ ತಮ್ಮ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ತಮ್ಮ ಪ್ರೊಫೈಲ್ ಚಿತ್ರವನ್ನು ತ್ರಿವರ್ಣಕ್ಕೆ ಬದಲಾಯಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ಮೋದಿ ಈ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿದೆ, ಮತ್ತೊಮ್ಮೆ ಹರ್ ಘರ್ ತಿರಂಗಾ ಅಭಿಯಾನವನ್ನು ಸ್ಮರಣೀಯ ಜನಾಂದೋಲನವನ್ನಾಗಿ ಮಾಡೋಣ. ನಾನು ನನ್ನ ಪ್ರೊಫೈಲ್ ಫೋಟೋವನ್ನು ಬದಲಾಯಿಸುತ್ತಿದ್ದೇನೆ ಮತ್ತು ಹಾಗೆ ಮಾಡುವ ಮೂಲಕ ನಮ್ಮ ತ್ರಿವರ್ಣ ಧ್ವಜವನ್ನು ಗೌರವಿಸಲು ನನ್ನೊಂದಿಗೆ ನೀವೂ ಕೂಡ ಕೈಜೋಡಿಸಿ ಎಂದು ಬರೆದುಕೊಂಡಿದ್ದಾರೆ.

ಹರ್ ಘರ್ ತಿರಂಗ ಅಭಿಯಾನವನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಭಿಯಾನದ ಅಡಿಯಲ್ಲಿ ಜುಲೈ 22, 2022 ರಂದು ಪ್ರಾರಂಭಿಸಿದ್ದು ಪ್ರಧಾನಿ ಮೋದಿ ಅವರೇ ದೇಶದ ಜನರು ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಮನವಿ ಮಾಡಿದ್ದರು. ಅಂದಿನಿಂದ ಈ ಅಭಿಯಾನವನ್ನು ಪ್ರತಿ ವರ್ಷ ನಡೆಸಲಾಗುತ್ತಿದ್ದು ಈ ಅಭಿಯಾನವನ್ನು ಘೋಷಿಸಿದ ಪ್ರಧಾನಿ, ಈ ಅಭಿಯಾನವು ತ್ರಿವರ್ಣ ಧ್ವಜದೊಂದಿಗೆ ನಮ್ಮ ಸಂಪರ್ಕವನ್ನು ಇನ್ನಷ್ಟು ಗಾಢಗೊಳಿಸುತ್ತದೆ ಎಂದು ಹೇಳಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page