
ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಹೆಚ್ಚಾಗಲಿದ್ದು, ಜುಲೈ 10ರಂದು ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಬೆಳಗಾವಿ, ಉತ್ತರ ಕನ್ನಡ ,ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ,ಕೊಡಗು, ಹಾಸನ ,ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ.
ಕರಾವಳಿ ಭಾಗದಲ್ಲಿ ಗಂಟೆಗೆ 40 ರಿಂದ 50 ಕಿಲೋ.ಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು ಜುಲೈ 10ರಂದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ, ಘಾಟ್ ರಸ್ತೆಗಳಲ್ಲಿ ಸಂಚರಿಸುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.











































