
ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ಬಲವಾದ ಗಾಳಿಯ ಜೊತೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಭಾರಿ ಮಳೆ ಆಗಲಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಬೆಳಗಾವಿ, ಧಾರವಾಡ, ಗದಗ ,ಬೀದರ್ ,ಕಲಬುರಗಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಆಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

















































