ಉಡುಪಿ – ದ. ಕ ಜಿಲ್ಲೆಗೆ ರೆಡ್ ಅಲರ್ಟ್

ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಸಹ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ರೆಡ್ ಅಲರ್ಟ್ ಜಾರಿಯಾಗಿದ್ದು, ಭಾರೀ ಮಳೆ ಬೀಳಲಿದೆ. ದ. ಕ ಮತ್ತು ಉಡುಪಿ ಜಿಲ್ಲೆಯ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಣೆ ಮಾಡಲಾಗಿದೆ.











