
ರಾಜ್ಯದ ಹಲವೆಡೆ ಕೆಲವು ದಿನಗಳಿಂದ ಬಾರಿ ಮಳೆಯಾಗುತ್ತಿದ್ದು, ಇಂದು ಕೊಡಗು ಹಾಸನ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿದ್ದು ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ಉಡುಪಿ ಗರಿಷ್ಠ ಉಷ್ಣಾಂಶ 25° ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಮಂಗಳೂರು ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್











