
ಕರಾವಳಿಯಲ್ಲಿ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಸದ್ಯ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಮಳೆಯಿಂದ ಬಿಡುವಿಲ್ಲದಂತಾಗಿದೆ.
ಮಲೆನಾಡು ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದೆ. ಸದ್ಯ ಮಲೆನಾಡು ಜಿಲ್ಲೆಗಳು ರೆಡ್ ಅಲರ್ಟ್‌ನಿಂದ ಯೆಲ್ಲೋ ಅಲರ್ಟ್‌ಗೆ ಮರಳಿದೆ. ಮುಂದಿನ 3 ದಿನ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತವರಣ ಮುಂದುವರಿಯಲಿದ್ದು, ಕೆಲವೊಮ್ಮೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.











