
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.













