
ಕರಾವಳಿಯ ಉಡುಪಿ ಮತ್ತು ದ. ಕ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿಯೂ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಹಾಗಾಗಿ ಕಳೆದ ಜುಲೈ ತಿಂಗಳಲ್ಲಿ ಆರ್ದ್ರತೆ ಮತ್ತು ಶಾಖ ಎದುರಿಸುತ್ತಿದ್ದ ಜನರು ಮುಂದಿನ ದಿನಗಳಲ್ಲಿ ಭಾರೀ ಮಳೆ ಎದುರಿಸುವ ಸಾಧ್ಯತೆ ಇದೆ. ಜೊತೆಗೆ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ದೇಶದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ಎಚ್ಚರಿಸಿದೆ.













