
ರಾಜ್ಯದೆಲ್ಲೆಡೆ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇಂದಿನಿಂದ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ.
ಉತ್ತರ ಕನ್ನಡ, ಉಡುಪಿ, ಕರಾವಳಿ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅರ್ಲಟ್ ಘೋಷಣೆ ಮಾಡಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ.













