
ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ ಆಗಲಿದ್ದು 30-40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಚಿಕ್ಕಮಗಳೂರು ಶಿವಮೊಗ್ಗ ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್.
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್.













