
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇಂದಿನಿಂದ 7 ದಿನಗಳ ಕಾಲ ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು ಭಾಗಗಳಲ್ಲಿ ಹಲವೆಡೆ ಮಳೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಕರಾವಳಿ ಕರ್ನಾಟಕದ ಉಳಿದ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.






























































































































